ಮಂಗಳೂರು: ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವೆಡೆ ಕಾಣಿಸಿಕೊಂಡ ಗುಂಡಿಗಳನ್ನು ಮುಚ್ಚುವಂತೆ ಸೂಚಿಸಲಾಗಿದ್ದರೂ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರ ವಿರುದ್ಧ ಸಂಚಾರಿ ಪೊಲೀಸರ ತಂಡ ಪ್ರಕರಣ ದಾಖಲಿಸುವ ಪತ್ರವನ್ನು ಕಳುಹಿಸಿದೆ. ಈ ಬೆನ್ನಲ್ಲೇ ಗುತ್ತಿಗೆದಾರರು ರಸ್ತೆ ಗುಂಡಿ ಮುಚ್ಚಿದ್ದಾರೆ.
ದೂರು ದಾಖಲು ಪತ್ರದ ವಿಚಾರ ತಿಳಿಯುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ರಾಷ್ಟ್ರೀಯ ಹೆದ್ದಾರಿ ನಿರ್ವಹಣೆಯ ಗುತ್ತಿಗೆದಾರರು, ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿ ಮುಚ್ಚುವ ಕೆಲಸ ಮಾಡುತ್ತಿದ್ದಾರೆ.
ಬಂಟ್ವಾಳ ಟ್ರಾಫಿಕ್ ಪೊಲೀಸರು ಮೊದಲು ಮೌಖಿಕವಾಗಿ ಸೂಚಿಸಿದ್ದರೂ ಇದರ ಬಗ್ಗೆ ಗುತ್ತಿಗೆದಾರರು ನಿರ್ಲಕ್ಷ್ಯ ತೋರಿದ್ದರು. ಈ ಹಿನ್ನೆಲೆಯಲ್ಲಿ ಪತ್ರವನ್ನು ಗುತ್ತಿಗೆದಾರ ಸಂಸ್ಥೆಗೆ ಪೊಲೀಸರು ಬರೆದಿದ್ದರು. ಪತ್ರ ತಲುಪಿದ ಬೆನ್ನಿಗೆ ಯಂತ್ರೋಪಕರಣಗಳನ್ನು ಬಳಸಿ ಗುಂಡಿಗಳಿಗೆ ಜಲ್ಲಿ ಮಿಶ್ರಿತ ಸಿಮೆಂಟ್ ಹಾಕಿ ಮುಚ್ಚುವ ಕೆಲಸವನ್ನು ಮಾಡುತ್ತಿದ್ದಾರೆ.
Click this button or press Ctrl+G to toggle between Kannada and English