ಕಪ್ಪುಹಣ ಸಕ್ರಮ ಮಾಡಿಕೊಂಡ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದೆ: ಡಿ.ಕೆ.ಶಿವಕುಮಾರ್

2:11 PM, Saturday, June 30th, 2018
Share
1 Star2 Stars3 Stars4 Stars5 Stars
(No Ratings Yet)
Loading...

d-k-shivkumarಬೆಂಗಳೂರು: ಕಪ್ಪುಹಣ ಸಕ್ರಮ ಮಾಡಿಕೊಂಡ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದ್ದು, ಇದರ ವಿರುದ್ಧ ಕಾನೂನು ರೀತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪು ಹಣ ಸಕ್ರಮ ಆರೋಪ ಪ್ರಕರಣ ಸಂಬಂಧ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸಿಬಿಐ ನ್ಯಾಯಾಲಯ ವಜಾ ಮಾಡಿದೆ. ನಮಗೂ ಅದಕ್ಕೂ ಸಂಬಂಧ ಇಲ್ಲ. ಆದರೂ ನಮ್ಮನ್ನು ಸೇರಿಸಬೇಕೆಂಬ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಆದರೆ ನಾನು ಅರ್ಜಿಗಿರ್ಜಿ ಹಾಕುವ ಯೋಚನೆ ಮಾಡಲ್ಲ. ‌ಸಿಕ್ಕಿ ಬೀಳುವೆವೆಂಬ ಆತಂಕದಲ್ಲಿರುವವರು ಅರ್ಜಿ ಹಾಕಿಕೊಂಡಿದ್ದಾರೆ. ಕಾನೂನು ಪ್ರಕಾರವೇ ಹೋರಾಟ ಮಾಡಿಕೊಳ್ತಾರೆ ಎಂದರು.

ಕಾವೇರಿ ನದಿ ನೀರು ವಿಚಾರದ ಕುರಿತಾಗಿ ಸರ್ವಪಕ್ಷಗಳ ಸಭೆ ಇಂದು ನಡೆಯುತ್ತಿದೆ. ಈ ಬಗ್ಗೆ ಕೇಂದ್ರದ ಕ್ರಮ ಹಾಗೂ ನ್ಯಾಯಾಲಯದ ಅಭಿಪ್ರಾಯವನ್ನು ಎಲ್ಲ ನಾಯಕರಿಗೆ ತಿಳಿಸುವ ಉದ್ದೇಶದಿಂದ ಇಂದು ಸಭೆ ಕರೆಯಲಾಗಿದೆ ಎಂದರು.

ಕಾವೇರಿ ನದಿ ವಿವಾದದ ಸಂಬಂಧ ಜುಲೈ 2ರಂದು ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ. ರಾಜ್ಯದಿಂದಲೂ ಇಬ್ಬರು ಅಧಿಕಾರಿಗಳ ನೇಮಕ ಆಗಿದ್ದು, ಸಭೆಯಲ್ಲಿ ತೆಗೆದುಕೊಳ್ಳುವ ತೀರ್ಮಾನ ಆಧರಿಸಿ, ಕಾನೂನು ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English