ಚಿಕ್ಕಮಗಳೂರು: ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ಒಂದು ತಿಂಗಳ ಕಾಲ ಚಿಕ್ಕಮಗಳೂರಿಗೆ ಸಂಪೂರ್ಣ ನಿಷೇಧ ಹೇರಿ ಜಿಲ್ಲಾಡಳಿತ ಆದೇಶಿಸಿದೆ.
ಶರಣ್ ಪಂಪ್ ವೆಲ್ ಗೆ ಜುಲೈ .6 ರಿಂದ ಆಗಸ್ಟ್ .4ರ ವರೆಗೆ 30 ದಿನಗಳ ಕಾಲ ಕಾಫಿನಾಡಿಗೆ ನಿರ್ಬಂಧ ಹೇರಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.
ಶರಣ್ ಪಂಪ್ ವೆಲ್ ಮೇಲೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಶರಣ್ ಅವರನ್ನು ಕರೆಸಿ ಚಿಕ್ಕಮಗಳೂರು, ಮೂಡಿಗೆರೆ, ಆಲ್ದೂರಿನಲ್ಲಿ ಬೈಠಕ್ ಹಮ್ಮಿಕೊಳ್ಳಲಾಗಿತ್ತು.
ಶರಣ್ ಪಂಪ್ ವೆಲ್ ಬಲಪಂಥೀಯ ನಿಲುವಿನಿಂದ ಪ್ರಭಾವಿತರಾಗಿದ್ದಾರೆ. ಕೋಮುದ್ವೇಷ ಹರಡುವ ಭಾಷಣ ಮಾಡುವ ಪ್ರವೃತ್ತಿ ಉಳ್ಳವರಾಗಿದ್ದಾರೆ. ಇವರ ಪ್ರಚೋದನಾಕಾರಿ ಭಾಷಣದಿಂದ ಗಲಾಟೆ, ಗುಂಪು ಘರ್ಷಣೆ ಗಳಂತಹ ಸನ್ನಿವೇಶಗಳಗಿವೆ ಎಂದು ಹೇಳಲಾಗಿದೆ.
ಚಿಕ್ಕಮಗಳೂರು ಸೇರಿ ಕೆಲ ಪಟ್ಟಣಗಳು ಮತೀಯ ಸೂಕ್ಷ್ಮ ಪ್ರದೇಶವಾಗಿದೆ. ಸಣ್ಣ ಘಟನೆಯೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಭಂಗ ತರುವ ಸಾಧ್ಯತೆಗಳಿವೆ. ಹಾಗಾಗಿ, ಮುಂದಿನ 30 ದಿನಗಳ ಕಾಲ ಶರಣ್ ಪಂಪ್ ವೆಲ್ ಗೆ ಚಿಕ್ಕಮಗಳೂರು ಜಿಲ್ಲೆಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









