ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಚತುರ್ವೇದಿ ಅವರ ಪುತ್ರಿಗೆ ಅತ್ಯಾಚಾರದ ಬೆದರಿಕೆ..!

11:15 AM, Tuesday, July 3rd, 2018
Share
1 Star2 Stars3 Stars4 Stars5 Stars
(No Ratings Yet)
Loading...

priyanka-chaturvedyಮುಂಬೈ: ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಚತುರ್ವೇದಿ ಅವರ ಪುತ್ರಿಗೆ ಟ್ವಿಟ್ಟರ್ ನಲ್ಲಿ ಕಿಡಿಗೇಡಿಯೊಬ್ಬ ಅತ್ಯಾಚಾರದ ಬೆದರಿಕೆ ಒಡ್ಡಿದ್ದು, ಈ ಸಂಬಂಧ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಿಯಾಂಕಾ ಚತುರ್ವೇದಿ ಅವರ 10 ವರ್ಷದ ಮಗಳನ್ನು ಅತ್ಯಾಚಾರ ಮಾಡುವುದಾಗಿ @GirishK1605 ಎಂಬ ಖಾತೆಯಿಂದ ಬೆದರಿಕೆ ಬಂದಿದೆ.

‘ನಾವು ರಾಜಕಾರಣಿಗಳು ಪ್ರತಿದಿನ ಟ್ರೋಲ್ ಆಗುತ್ತೇವೆ. ಅದೇನು ಹೊಸತಲ್ಲ. ಆದರೆ ನನ್ನ ಮಗಳ ಬಗ್ಗೆ ಮಾತನಾಡುವುದು ಸರಿಯೇ? ಅದೂ ಇಷ್ಟು ಅವಾಚ್ಯವಾಗಿ? ಅದಕ್ಕೆಂದೇ ನಾನು ಅವರ ವಿರುದ್ಧ ದೂರು ನೀಡಬೇಕೆಂದು ನಿರ್ಧರಿಸಿದ್ದೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English