ತುಮಕೂರು : ಲಾಡ್ಜ್ ಒಂದರಲ್ಲಿ ದಾವಣಗೆರೆ ಪಿಎಸ್ಐ ನಾಗರಾಜಪ್ಪ ನೇಣಿಗೆ ಶರಣಾಗಿದ್ದಾರೆ. ಅವರು ಬರೆದಿಟ್ಟಿದ್ದ ಡೆತ್ನೋಟ್ ಲಾಡ್ಜ್ನ ರೂಮ್ನಲ್ಲಿ ಪತ್ತೆಯಾಗಿದೆ.
ಡೆತ್ ನೋಟ್ನಲ್ಲಿ, `ನನ್ನ ಸಾವಿಗೆ ನಾನೇ ಕಾರಣ’. ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ. ಅಲ್ಲದೇ ಹೋಟೆಲ್ ಮಾಲೀಕರಿಗೂ ಡೆತ್ನೋಟ್ನಲ್ಲಿ ಕ್ಷಮೆ ಕೇಳಿದ್ದಾರೆ.
ಜುಲೈ .1ರಂದು ಬೆಳಿಗ್ಗೆ 7 ಗಂಟೆಗೆ ನಗರದದಲ್ಲಿರುವ ದ್ವಾರಕಾ ಹೋಟೆಲ್ನ 4ನೇ ಮಹಡಿಯಲ್ಲಿ ರೂಮ್ ಬಾಡಿಗೆ ಪಡೆದಿದ್ದರು. ರೂಮ್ಗೆ ತೆರಳಿದ್ದಾಗಿನಿಂದ ಅವರು ಹೊರಗೆ ಬಂದಿರಲಿಲ್ಲ. ಲಾಡ್ಜ್ ಸಿಬ್ಬಂದಿ ಕರೆ ಮಾಡಿದಾಗಲೂ ಅವರು ಕರೆ ಸ್ವೀಕರಿಸಿರಲಿಲ್ಲ. ಲಾಡ್ಜ್ನಲ್ಲಿ ದುರ್ವಾಸನೆ ಬಂದಾಗ, ಸಿಬ್ಬಂದಿ ಮಾಲೀಕರಿಗೆ ಮಾಹಿತಿ ನೀಡಿದ್ದರು.
ಬಾಗಿಲು ತೆರೆದು ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ 4 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದು, ಮೃತದೇಹ ಕೊಳೆತು ಹುಳಗಳಾಗಿದ್ದವು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ರಾಜ್ಯ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









