ಉಡುಪಿ: ಶೀರೂರು ಮಠಾಧೀಶರ ಬಗ್ಗೆ ಕೆಲ ತಿಂಗಳ ಹಿಂದೆ ಆರಂಭವಾಗಿದ್ದ ಚರ್ಚೆ ಈಗ ಮತ್ತೆ ಜೀವ ಪಡೆದುಕೊಂಡಿದೆ. ಶೀರೂರು ಸ್ವಾಮೀಜಿ ಶಿಷ್ಯ ಸ್ವೀಕಾರ ಮಾಡಬೇಕೆಂಬ ವಿಚಾರದಲ್ಲಿ ಇತರ ಅಷ್ಟಮಠಾಧೀಶರು ಕೆಲವೊಂದು ನಿರ್ಣಯ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಭಾನುವಾರ ಸೇರಿದ್ದ ಐವರು ಮಠಾಧೀಶರು ಈ ಬಗ್ಗೆ ಚರ್ಚೆ ನಡೆಸಿದ್ದು ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ ಎಂದು ಪರ್ಯಾಯ ಪಲಿಮಾರು ಮಠಾಧೀಶರು ತಿಳಿಸಿದ್ದಾರೆ.
ಅಷ್ಟಮಠಾಧೀಶರು ಪಾಲಿಸಬೇಕಾದ ನಿಯಮಗಳನ್ನು ಶೀರೂರು ಸ್ವಾಮೀಜಿ ಪಾಲಿಸುತ್ತಿಲ್ಲ ಎಂಬ ಬಗ್ಗೆ ಕೆಲ ತಿಂಗಳ ಹಿಂದೆ ಚರ್ಚೆ ಆರಂಭವಾಗಿತ್ತು. ಸದ್ಯ ಶೀರೂರು ಮಠದ ಪಟ್ಟದ ದೇವರು ಕೃಷ್ಣಮಠದಲ್ಲೇ ಇದ್ದು ಪಲಿಮಾರು ಸ್ವಾಮೀಜಿ ಪೂಜೆ ನಡೆಸುತ್ತಿದ್ದಾರೆ.
ಶೀರೂರು ಮಠದ ಶಿಷ್ಯ ಸ್ವೀಕಾರದ ಬಗ್ಗೆ ಯಾವುದೇ ತೀರ್ಮಾನಕ್ಕೆ ಬಂದಿಲ್ಲ, ಪೇಜಾವರ ಸ್ವಾಮೀಜಿ ನೇತೃತ್ವದಲ್ಲಿ ಇನ್ನೊಮ್ಮೆ ಸಭೆ ಸೇರಿ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಅಷ್ಟಮಠಾಧೀಶರಲ್ಲಿ ಬಹುಮತದ ತೀರ್ಮಾನವೇ ಅಂತಿಮ ಎಂದು ಪರ್ಯಾಯ ಪಲಿಮಾರು ಸ್ವಾಮೀಜಿ ತಿಳಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶೀರೂರು ಸ್ವಾಮೀಜಿಯ ಶಿಷ್ಯ ಸ್ವೀಕಾರದ ಕುರಿತು ಚರ್ಚೆ ಆರಂಭವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
Click this button or press Ctrl+G to toggle between Kannada and English