ಮಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡಿಸಿದ ಚೊಚ್ಚಲ ಬಜೆಟ್ ಉತ್ತಮ ಹಾಗೂ ಸ್ವಾಗತಾರ್ಹ ಎಂದು ವಸತಿ ಇಲಾಖೆ ಸಚಿವ ಯು.ಟಿ.ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸರ್ವ ಜನಾಂಗಕ್ಕೆ ಸಮನಾದ ಬಜೆಟ್ ಇದಾಗಿದೆ. ಕರಾವಳಿ ಭಾಗಕ್ಕೆ ಈ ಬಾರಿ ಅಗತ್ಯ ಅನುದಾನ ನೀಡದಿದ್ದರೂ ಹಿಂದೆ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್ನಲ್ಲಿ ಕರಾವಳಿಗೆ ಸಾಕಷ್ಟು ಅನುದಾನ ನೀಡಿದ್ದರು ಎಂದರು.
ಬಿಜೆಪಿಯವರಿಗೆ ಟೀಕೆ ಮಾಡುವುದೇ ಅವರ ಕೆಲಸ. ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲೆಗೆ ನೀಡಿದ ಅನುದಾನದ ಬಗ್ಗೆ ನಮಗೆ ಗೊತ್ತಿದೆ. ಅಲ್ಪಸಂಖ್ಯಾತ ಇಲಾಖೆ ಸಂಬಂಧ ಮುಂದಿನ ದಿನಗಳಲ್ಲಿ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
Click this button or press Ctrl+G to toggle between Kannada and English