ಬೆಳಗಾವಿ: ಸಿಎಂ ಹೆಚ್. ಡಿ. ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದ್ದರೆ ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸುವ ಕೆಲಸ ಸಮ್ಮಿಶ್ರ ಸರ್ಕಾರ ಮಾಡಲಿದೆ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಸ್ಟಷ್ಟನೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರೈತರ ಸಾಲ ಮನ್ನಾ ಹಳೇ ಮೈಸೂರು ಭಾಗಕ್ಕೆ ಮಾತ್ರ ಸೀಮಿತವಲ್ಲ. ಇಡೀ ರಾಜ್ಯದ ರೈತರು ಇದರ ಸದುಪಯೋಗ ಪಡೆಯಲಿದ್ದಾರೆ. ಜೊತೆಗೆ ಇದೇನು ನಮ್ಮ ಸರ್ಕಾರದ ಅಂತಿಮ ಬಜೆಟ್ ಅಲ್ಲ. ಇನ್ನೂ ಸಪ್ಲಿಮೆಂಟರಿ ಬಜೆಟ್ಗಳು ಬರಲಿವೆ ಆಗ ಉ.ಕ ಭಾಗಕ್ಕೆ ಹೆಚ್ಚಿನ ಆದ್ಯತೆ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.
ಮಾಜಿ ಸಚಿವ ಹೆಚ್.ಕೆ.ಪಾಟೀಲ ಸೇರಿದಂತೆ ಹಲವು ನಾಯಕರು ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದೆ ಎನ್ನುತ್ತಿದ್ದಾರೆ. ಯಾವ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ನಮಗೆ ಗೊತ್ತಿಲ್ಲ. ದೊಡ್ಡವರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಮತ್ತೆ ಉತ್ತರ ಕರ್ನಾಟಕ ಪ್ರತ್ಯೇಕಿಸುವ ಕೂಗು ಕೇಳಿ ಬರುತ್ತಿದೆ. ಆದ್ರೆ ಯಾವುದೇ ಕಾರಣಕ್ಕೂ ರಾಜ್ಯ ಇಬ್ಬಾಗ ಆಗಲು ಬಿಡುವುದಿಲ್ಲ. ಯಾರೋ ಒಬ್ಬರೂ ಈ ರೀತಿ ಹೇಳಿದರೆ ಅದಕ್ಕೆ ತಲೆ ಕೆಡಿಸಿಕೊಳ್ಳುವ ಅಗತ್ಯತೆ ಇಲ್ಲ ಎಂದರು.
Click this button or press Ctrl+G to toggle between Kannada and English