ಉಡುಪಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಶಾಲೆಗೆ ಉಡುಪಿ ಜಿಲ್ಲಾಡಳಿತ ರಜೆ ಘೋಷಣೆ ಮಾಡಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಆದರೆ ಮಳೆಯ ತೀವ್ರತೆಗೆ ಅನುಗುಣವಾಗಿ ನೆರೆ ಭೀತಿ ಇರುವ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಶಾಲಾ ಅಭಿವೃದ್ಧಿ ಸಮಿತಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
Click this button or press Ctrl+G to toggle between Kannada and English