ತೊಕ್ಕೊಟ್ಟು ಮತ್ತು ಪಂಪ್‌ವೆಲ್ ಫ್ಲೈಓವರ್ ಕಾಮಗಾರಿ ವಿಳಂಬ ತು.ರ.ವೇ. ವತಿಯಿಂದ ಪ್ರತಿಭಟನೆ!

3:38 PM, Saturday, July 7th, 2018
Share
1 Star2 Stars3 Stars4 Stars5 Stars
(No Ratings Yet)
Loading...

tulunaduಮಂಗಳೂರು: ರಾ.ಹೆ.66ರ ತೊಕ್ಕೊಟ್ಟು ಮತ್ತು ಪಂಪ್‌ವೆಲ್ ಫ್ಲೈಓವರ್ ಕಾಮಗಾರಿ ವಿಳಂಬ ಹಾಗೂ ಅಕ್ರಮ ಟೋಲ್ ಸಂಗ್ರಹದ ವಿರುದ್ಧ ತುಳುನಾಡ ರಕ್ಷಣಾ ವೇದಿಕೆಯ ವತಿಯಿಂದ ಶನಿವಾರ ನಗರದ ಪಂಪ್‌ವೆಲ್ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು.

ತುರವೇ ಸ್ಥಾಪಕಾಧ್ಯಕ್ಷ ಯೋಗಿಶ್ ಶೆಟ್ಟಿ ಜೆಪ್ಪು ಮಾತನಾಡಿ ನವಯುಗ ಕಂಪೆನಿಯು 2010ರಲ್ಲಿ ರಾ.ಹೆ.66ರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿತ್ತು.

tulunadu-2ಆದರೆ 8 ವರ್ಷವಾದರೂ ಕೂಡ ಇದರ ಕಾಮಗಾರಿ ಪೂರ್ಣಗೊಂಡಿಲ್ಲ. ಎರಡೂ ಪ್ರಮುಖ ಜಂಕ್ಷನ್‌ನ ಫ್ಲೈ ಓವರ್ ಕಾಮಗಾರಿ ವಿಳಂಬದಿಂದ ಸಾವಿರಾರು ಮಂದಿಗೆ ತೊಂದರೆಯಾಗುತ್ತಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿದ್ದ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಹೇಳಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English