ಉಡುಪಿ: ಮನೆಯಲ್ಲಿ ಮಲಗಿದ್ದಲ್ಲಿಯೇ ಮಹಿಳೆವೋರ್ವಳು ಸಾವನ್ನಪ್ಪಿರುವ ಘಟನೆ ಉಡುಪಿಯ ಕಾಪು ತಾಲೂಕಿನ ಪಡುಗ್ರಾಮದಲ್ಲಿ ನಡೆದಿದೆ.
ಪಡುಬಿದ್ರಿ ಶಾಲೆಯ ಶಿಕ್ಷಕಿ ಮೀನಾಕ್ಷಿ (53) ಮೃತ ಮಹಿಳೆ. ಮಹಿಳೆ ಬೆಳಿಗ್ಗೆ ಬಾಗಿಲು ತೆರೆಯದಿದ್ದಾಗ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು, ಮನೆ ಬಾಗಿಲು ಒಡೆದು ಒಳಗೆ ಹೋದಾಗ ಮಹಿಳೆ ಮೃತಪಟ್ಟಿರುವುದು ತಿಳಿದುಬಂದಿದೆ. ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಮೀನಾಕ್ಷಿ, ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮೂಲತಃ ಹುಬ್ಬಳ್ಳಿ ಮೂಲದ ಮೀನಾಕ್ಷಿ ಹಲವು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English