ಬೆಂಗಳೂರು: ಮಾವು ಬೆಳೆಗಾರರ ಸಮಸ್ಯೆ ಬಗೆಹರಿಸಲು ಮುಂದಾಗಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನೆರೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ನೆರೆಯ ರಾಜ್ಯ ಕೇರಳದಲ್ಲಿ ಕಾಣಿಸಿಕೊಂಡ ನಿಫಾ ವೈರಸ್ ಆತಂಕದಿಂದ ಮಾವಿಗೆ ಬೇಡಿಕೆ ಕುಸಿದು ರೈತರು ಸಂಕಟಕ್ಕೆ ಸಿಲುಕಿದ್ದರು. ರೈತರು ಬೆಳೆದ ಟನ್‌ಗಟ್ಟಲೆ ಮಾವುಗಳನ್ನು ಕೊಳ್ಳುವವರಿಲ್ಲದೆ ನಷ್ಟಕ್ಕೆ ಸಿಲುಕಿದ್ದಾರೆ.
ಮಾವು ಬೆಳೆಗಾರರ ಸಮಸ್ಯೆಯನ್ನು ಮನಗಂಡಿರುವ ಮುಖ್ಯಮಂತ್ರಿಯವರು ಮಾವಿಗೆ ಬೆಂಬಲ ಬೆಲೆ ನೀಡುವ ಕುರಿತು ಚಿಂತನೆ ನಡೆಸಿದ್ದಾರೆ.
ಮಾವು ಬೆಳೆಯನ್ನು ಆಂಧ್ರಪ್ರದೇಶ ಹಾಗೂ ಮಹರಾಷ್ಟ್ರ ರಾಜ್ಯಗಳಿಗೆ ರವಾನಿಸಲು ಆಯಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಮಾವು ಬೆಳೆಗಾರರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಮಾವು ಬೆಳೆಗಾರರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English