ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗಿನ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸದ ಅನುಭವವಾಗಿದೆ.
ಮಧ್ಯಾಹ್ನ 12.50 ರ ಸಮಯದಲ್ಲಿ ಸುಳ್ಯ ತಾಲೂಕಿನ ಮಡಪ್ಪಾಡಿ, ಹರಿಹರಪಲ್ಲತಡ್ಕ, ಐನೆಕಿದು, ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಕೆಲವು ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವ ಜನರಿಗಾಗಿದೆ ಎಂದು ತಿಳಿದುಬಂದಿದೆ.
ಇನ್ನು ಕೊಡಗು ಜಿಲ್ಲೆಯ ಹಲವೆಡೆ ಕಂಪಿಸಿದ ಭೂಮಿ. ಮಧ್ಯಾಹ್ನ 12.55ರ ವೇಳೆಗೆ ಕೆಲ ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದ ಅನುಭವ ಆಗಿದೆ. ಮಡಿಕೇರಿ, ಸೋಮವಾರಪೇಟೆ ಸೇರಿದಂತೆ ಹಲವೆಡೆ ಕಂಪಿಸಿದ ಅನುಭವವಾಗಿದೆ. ಯಾವುದೇ ಅನಾಹುತ ಸಂಭವಿಸಲಿಲ್ಲ ಎನ್ನಲಾಗಿದೆ.
Click this button or press Ctrl+G to toggle between Kannada and English