ಕಾಡಿಗೆ ಬೆಂಕಿ ಹಚ್ಚುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು: ಆರ್.ಶಂಕರ್

5:31 PM, Monday, July 9th, 2018
Share
1 Star2 Stars3 Stars4 Stars5 Stars
(No Ratings Yet)
Loading...

R-Shankarಬೆಂಗಳೂರು : ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ದುಷ್ಕರ್ಮಿಗಳು ಕಳ್ಳ ಸಾಗಾಣಿಕೆ ಮಾಡುವುದು ಮತ್ತು ಅದನ್ನು ಮುಚ್ಚಿ ಹಾಕಲು ಕಾಡಿಗೆ ಬೆಂಕಿ ಹಚ್ಚುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಆರ್. ಶಂಕರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಇಂದು ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಹಿರಿಯ ಸದಸ್ಯ ಕೆ.ಎಸ್. ಈಶ್ವರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರಣ್ಯದಲ್ಲಿ ಅಕ್ರಮವಾಗಿ ಮರಗಳ ಕಳ್ಳ ಸಾಗಾಣಿಕೆ ಹಾಗೂ ಬೇಕಂತಲೆ ಕಾಡಿಗೆ ಬೆಂಕಿ ಹಚ್ಚುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 2,427 ಅರಣ್ಯ ಬೆಂಕಿ ಪ್ರಕರಣಗಳು ನಡೆದಿದ್ದು, ಸುಮಾರು 7 ಸಾವಿರದ 500 ಹೆಕ್ಟೆರ್ ಅರಣ್ಯ ಪ್ರದೇಶ ಹಾನಿಗೊಳಗಾಗಿದೆ. ಕಾಡ್ಗಿಚ್ಚಿನಿಂದ ಅರಣ್ಯ ಮತ್ತು ವನ್ಯಜೀವಿಗಳನ್ನು ಸಂರಕ್ಷಿಸಲು 12 ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಮಧ್ಯೆ ಪ್ರವೇಶಿಸಿ ಮಾತನಾಡಿದ ಶಾಸಕ ಅರಗಜ್ಞಾನೇಂದ್ರ ಅವರು, ಕಾಡಿನಲ್ಲಿ ಬೆಂಕಿ ಬಿದ್ದರೂ ಅರಣ್ಯ ಸಿಬ್ಬಂದಿ ತಲೆ ಕೆಡಿಸಿಕೊಳ್ಳುವುದಿಲ್ಲ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಮುಂದುವರೆದು ಮಾತನಾಡಿದ ಈಶ್ವರಪ್ಪ, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಕಾಡು ಪ್ರಾಣಿಗಳಿಂದ ರೈತರಿಗೆ ಆಗಿರುವ ನಷ್ಟದ ವಿವರವನ್ನು ಕೇಳಿದಾಗ, ಕಳೆದ ಮೂರು ವರ್ಷಗಳಲ್ಲಿ 21,150 ಪ್ರಕರಣಗಳಲ್ಲಿ ರೈತರಿಗೆ ನಷ್ಟವಾಗಿದೆ. ಇದಕ್ಕೆ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

ವನ್ಯಜೀವಿಗಳ ರಕ್ಷಣೆಗೆ ಹೆಜ್ಜೆ, ಎಮ್‍ಸ್ಟ್ರೈಪ್ಸ್, ಟ್ಯಾಪ್‍ಗಳನ್ನು ಬಳಸಿಕೊಳ್ಳಲಾಗಿದೆ ಅಲ್ಲದೆ, ವನ್ಯ ಪ್ರಾಣಿಗಳ ಚಲನವಲನಗಳ ಮೇಲೆ ನಿಗಾ ಇಡಲು ರೇಡಿಯೋ ಕಾಲರ್ಗಳನ್ನು ಅಳವಡಿಸಲಾಗಿದೆ ಎಂದು ಶಂಕರ್ ಹೇಳಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English