ಮಂಗಳೂರು: ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಎಲ್ಒಸಿ ಮೂಲಕ ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆಂಡ್ರೋ ಸುರೇಶ್ ರಾಡ್ರಿಗಸ್ ಬಂಧಿತ ಆರೋಪಿ. ಈತನಿಗೆ ಮಂಗಳೂರು ಸಿಜೆಎಂ 7ನೇ ನ್ಯಾಯಾಲಯವು ಜುಲೈ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಎಲ್ಒಸಿ ಮೂಲಕ ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಆರೋಪಿಯು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಿಚಾರವನ್ನು ಬಾಯ್ಬಿಟ್ಟಿದ್ದಾನೆ.
Click this button or press Ctrl+G to toggle between Kannada and English