- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ವಿಚಾರ ಸಭೆಯಲ್ಲಿ ಚರ್ಚಿಸಿದ್ದೇವೆ: ಹೆಚ್ ಕೆ ಪಾಟೀಲ್

h-k-patil [1]ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ವಿಚಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ಮಾಜಿ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಶಾಸಕಾಂಗ ನಾಯಕರಿಗೆ ಈ ಸಂಬಂಧ ಪತ್ರ ಬರೆದಿದ್ದೇವೆ. ಮೂರು ವಿಚಾರಗಳ ಬಗ್ಗೆ ಪತ್ರದಲ್ಲಿ ಪ್ರಸ್ತಾಪ ಮಾಡಿಲಾಗಿದ್ದು, ಉತ್ತರ ಕರ್ನಾಟಕಕ್ಕೆ ಅನ್ಯಾಯ, ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಾಗಲಿ, ಹೊಸ ಯೋಜನೆ ಘೋಷಣೆ ಮಾಡೋದಾಗಲಿ ಆಗಿಲ್ಲ ಈ ವಿಚಾರ ತಿಳಿಸಿದ್ದೇವೆ. ಇವುಗಳ ಬಗ್ಗೆ ಶಾಸಕಾಂಗ ಸಭೆಯಲ್ಲೂ ಚರ್ಚೆ ಮಾಡಿದ್ದೇವೆ ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‍ ಪಕ್ಷದ ಮೇಲೆ ಜನರಿಗೆ ತಪ್ಪು ಸಂದೇಶ ರವಾನೆಯಾಗುವ ವಿಚಾರಗಳು ನಡೆಯುತ್ತಿದ್ದು, ಅದರ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಯಾವುದೇ ಭಾಗದ ರೈತರಿಗೆ ಅನಾನುಕೂಲ ಆಗಬಾರದು, ವಂಚನೆ ಆಗಬಾರದು ಅಂತ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯರಿಗೆ ತಿಳಿಸಲಾಗಿದೆ. ಇದನ್ನು ಸಿದ್ದರಾಮಯ್ಯನವರು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಹೆಚ್‍.ಡಿ. ಕುಮಾರಸ್ವಾಮಿ ಕೂಡ ಈ ವಿಚಾರಗಳನ್ನು ಗಂಭೀರವಾಗಿ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಸಮಗ್ರ ಕರ್ನಾಟಕಕ್ಕೆ ನ್ಯಾಯ ಸಿಗುತ್ತದೆ ಅಂದುಕೊಂಡಿದ್ದೇನೆ. ಸರ್ಕಾರದ ಇಮೇಜ್ ದೃಷ್ಟಿಯಿಂದ, ಸಮ್ಮಿಶ್ರ ಸರ್ಕಾರದ ಹಿತ ದೃಷ್ಟಿಯಿಂದ ಇದೆಲ್ಲವೂ ಆಗಬೇಕು ಎಂದಿದ್ದಾರೆ.