ಬೆಂಗಳೂರು: ಪ್ರಯಾಣಿಕರಿಗೆ ಹೊರೆಯಾಗಬಾರದೆಂಬ ದೃಷ್ಟಿಯಿಂದ ಬಿಎಂಟಿಸಿ ಬಸ್ ದರ ಏರಿಕೆ ಪ್ರಸ್ತಾಪ ಸದ್ಯಕ್ಕಿಲ್ಲ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ.
ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೀಸೆಲ್ ದರ ಹೆಚ್ಚಳವಾದ್ದರಿಂದ ಬಿಎಂಟಿಸಿ ಮೇಲೆ ಕೆಲ ಮಟ್ಟಿಗೆ ಆರ್ಥಿಕ ಹೊರೆ ಉಂಟಾಗಿದೆ ಆದಾಗ್ಯೂ ಕೂಡ ಪ್ರಯಾಣಿಕರಿಗೆ ಭಾರವಾಗದಿರಲಿ ಎನ್ನುವ ಕಾರಣಕ್ಕಾಗಿ ಸಧ್ಯಕ್ಕೆ ಬಿಎಂಟಿಸಿ ದರವನ್ನು ಹೆಚ್ಚಿಸುವ ಯೋಚನೆ ಇಲ್ಲ ಎಂದು ಹೇಳಿದರು.
ಸದ್ಯಕ್ಕೆ ಬೆಂಗಳೂರಲ್ಲಿ ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವ ಸಿದ್ದರಾಮಯ್ಯ ಪ್ರಸ್ತಾವವನ್ನು ಮುಂದುವರೆಸುವ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಯವರ ಬಳಿ ಚರ್ಚೆ ನಡೆಸಿದ್ದೇನೆ, ಗುರುವಾರ ಸದನದಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ಕೊಡುವಾಗ ಮುಖ್ಯಮಂತ್ರಿಗಳು ಈ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಇನ್ನೆರೆಡು ತಿಂಗಳಲ್ಲಿ ಬಿಎಂಟಿಸಿಗೆ 2,800 ಹೊಸ ನೌಕರರನ್ನು ಸೇರ್ಪಡೆ ಮಾಡಿಕೊಳ್ಳಾಗುತ್ತದೆ, ನಂತರವಷ್ಟೇ ಅಂತರ್ ನಿಗಮ ವರ್ಗಾವಣೆ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಎಂಟಿಸಿ ಎಂಡಿ ಪುನ್ನುರಾಜ್ ತಿಳಿಸಿದ್ದಾರೆ.
Click this button or press Ctrl+G to toggle between Kannada and English