ಮಂಗಳೂರು : ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಧ್ರುವ್ ಡಿ. ಶೆಟ್ಟಿ (22) ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಜುಲೈ ೨ ರಂದು ಮಂಗಳೂರು ಸೆನ್ ಠಾಣಾ ಪೊಲೀಸರು ಎನ್ಡಿಪಿಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿ 5 ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಇವರಿಗೆ ಮಾದಕ ವಸ್ತುವನ್ನು ಪೂರೈಸುತ್ತಿದ್ದ ಆರೋಪಿ ಧ್ರುವ್ ಶೆಟ್ಟಿಯನ್ನು ಮೈಸೂರಿನಲ್ಲಿ ರವಿವಾರ ಬಂಧಿಸಲಾಗಿದೆ. ಆರೋಪಿಯಿಂದ ಮೊಬೈಲ್, ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









