ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳಾ ಪಿಂಪ್ ಸಹಿತ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಪಡುಬಿದ್ರೆಯ ಮುದರಂಗಡಿ ಮನೆ ನಿವಾಸಿ ಸಜಿತ್ ಶೇಖರ್ (30) ಹಾಗೂ ಮಹಿಳಾ ಪಿಂಪ್ ಒಬ್ಬಾಕೆಯನ್ನು ಬಂಧಿಸಲಾಗಿದ್ದು, ಬಂಧಿತರಿಂದ 5 ಮೊಬೈಲ್ ಫೋನ್ಗಳ ಸಹಿತ 15,240 ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಸಜಿತ್ ಶೇಖರ್ ಈ ಮನೆಯನ್ನು ಬಾಡಿಗೆಗೆ ಪಡೆದು ಮಹಿಳಾ ಪಿಂಪ್ ಜೊತೆ ಯುವತಿಯರನ್ನು ಈ ಮನೆಯಲ್ಲಿ ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಳ್ಳುತ್ತಿದ್ದನಂತೆ. ಕೊಟ್ಟಾರ ಚೌಕಿ ಪಂಪ್ ಹೌಸ್ ಬಳಿಯಲ್ಲಿರುವ ಮನೆಯೊಂದರಲ್ಲಿ ಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ಪೆಕ್ಟರ್ ಶಾಂತಾರಾಮ, ಎಸ್ಐ ಶ್ಯಾಮ್ ಸುಂದರ್, ಕಾವೂರು ಪೊಲೀಸ್ ಇನ್ಸ್ಪೆಕ್ಟರ್ ಕೆ.ಆರ್. ನಾಯಕ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
Click this button or press Ctrl+G to toggle between Kannada and English