ಕೋಲಾರ: ಮಧ್ಯಾಹ್ನದ ಬಿಸಿಯೂಟದ ಸಾಂಬಾರ್ನಲ್ಲಿ ಹಲ್ಲಿ ಬಿದ್ದಿರುವುದನ್ನು ಗಮನಿಸದೆ ಮಕ್ಕಳಿಗೆ ಊಟ ನೀಡಿದ್ದ ಪರಿಣಾಮ 15 ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ಡಿ.ಪಿ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಊಟ ಮಾಡಿದ ಬಳಿಕ ಮಕ್ಕಳು ವಾಂತಿ-ಬೇಧಿಯಿಂದ ಅಸ್ವಸ್ಥರಾಗಿದ್ದು, ಮಕ್ಕಳನ್ನು ಕಾಮಸಮುದ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಇದೀಗ ಪೋಷಕರು ಪ್ರಾಂಶುಪಾಲ ವೆಂಕೋಬರಾವ್ ಹಾಗೂ ಅಡುಗೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Click this button or press Ctrl+G to toggle between Kannada and English