ಬಂಟ್ವಾಳ: ಕೊಡ್ಮಾಣಿನ ಯುವಕನೋರ್ವ ಯುವತಿಗೆ ಹಲ್ಲೆ ನಡೆಸಿದ್ದು, ಆತನ ಮೃತದೇಹ ಆಕೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೊಡ್ಮಾಣ್ ನಿವಾಸಿ ಸುಧೀರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಘಟನೆಯಲ್ಲಿ ಗಾಯಗೊಂಡ ಸುಜೀರಿನ ಯುವತಿ ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಯುವತಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಲ್ಲೆ ನಡೆಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಘಟನೆಗೆ ಸ್ಪಷ್ಟ ಕಾರಣ ಪೊಲೀಸ್ ತನಿಖೆಯ ಬಳಿಕ ತಿಳಿದು ಬರಬೇಕಿದೆ.
ಸುಧೀರ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









