- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

20 ವರ್ಷಗಳ ಬಳಿಕ 2ನೇ ಬಾರಿ ಚಾಂಪಿಯನ್​ ಆಗಿ ಹೊರಹೊಮ್ಮಿದ ಫ್ರಾನ್ಸ್​..!

france [1]ಮಾಸ್ಕೋ: ಫ್ರಾನ್ಸ್ ತಂಡವು ಫುಟ್ಬಾಲ್ ಜಗತ್ತಿನ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫಿಫಾ ವಿಶ್ವಕಪ್ ಫುಟ್ಬಾಲ್ ಫೈನಲ್ ಪಂದ್ಯದಲ್ಲಿ ಕ್ರೋವೇಶಿಯಾವನ್ನು ಮಣಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

france-2 [2]ರಷ್ಯಾದ ಮಾಸ್ಕೋದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ತಂಡವು ಕ್ರೋವೇಶಿಯಾವನ್ನು 4-2 ಅಂತರದ ಗೋಲುಗಳಿಂದ ಮಣಿಸಿದೆ. 20 ವರ್ಷಗಳ ಬಳಿಕ 2ನೇ ಬಾರಿಗೆ ಫ್ರಾನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಹಿಂದೆ 1998ರಲ್ಲಿ ಫ್ರಾನ್ಸ್ ತಂಡ ಫುಟ್ಬಾಲ್ ವಿಶ್ವಕಪ್ ಗೆದ್ದಿತ್ತು.

ಕ್ರೋವೇಶಿಯಾವು ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯ ಫೈನಲ್ ತಲುಪಿತ್ತು.