ಮಂಗಳೂರು: ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಧರ್ಮನಗರದ ಬೊಟ್ಟುವಿನ ನಿವಾಸಿಯಾದ ಮುಕ್ತಾರ್ (24) ಬಂಧಿತ ಆರೋಪಿ. ಈತನ ವಿರುದ್ಧ ಉಳ್ಳಾಲ ಮತ್ತು ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಹಾಗೂ ಹಲ್ಲೆ ಪ್ರಕರಣದ ಮೇಲೆ ಕೇಸ್ ದಾಖಲಾಗಿತ್ತು.
ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯದಿಂದ 4 ಬಾರಿ ವಾರಂಟ್ ಜಾರಿಯಾದರೂ ಮುಕ್ತಾರ್ ಕೋರ್ಟ್ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದಾರೆ.
Click this button or press Ctrl+G to toggle between Kannada and English