ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಸೇತುವೆಯೊಂದು ಕೊಚ್ಚಿ ಹೋಗಿದೆ. ಇದರಿಂದ ಹಲವು ಗ್ರಾಮಗಳ ಸಂಪರ್ಕ ಸ್ಥಗಿತಗೊಂಡಿದೆ.
ಖಾನಾಪುರ ತಾಲೂಕಿನ ಹಲ್ತರಾ ನಾಲೆಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗಿತ್ತು. ಈ ಸೇತುವೆ ಖಾನಾಪುರ ಹಾಗೂ ಶಿರೋಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗೆ ನಿರ್ಮಿಸಲಾಗಿತ್ತು.
ಕಳೆದ ಐದು ವರ್ಷಗಳಲ್ಲಿ ಮೂರು ಸಲ ಈ ಸೇತುವೆ ಕೊಚ್ಚಿ ಹೋಗಿದ್ದು, ಕಾಮಗಾರಿ ಗುಣಮಟ್ಟದ ಕುರಿತು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.
Click this button or press Ctrl+G to toggle between Kannada and English