ಶೀರೂರು ಲಕ್ಷ್ಮೀವರ ತೀರ್ಥ ಶ್ರೀ ದೈವಾಧೀನ

9:16 AM, Thursday, July 19th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Shiroor-Swamiಉಡುಪಿ : ಶೀರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳು(55) ಗುರುವಾರ ಇಹಲೋಕ ತ್ಯಜಿಸಿದರು. ಬುಧವಾರ ಫುಡ್ ಪಾಯ್ಸನ್ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸ್ವಾಮೀಜಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ವಿಪರೀತ ವಾಂತಿ ಮಾಡಿದ ಹಿನ್ನೆಲೆಯಲ್ಲಿ  ಬುಧವಾರ ಬೆಳಗ್ಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳ ಆರೋಗ್ಯ ತೀರಾ ಹದಗೆಟ್ಟಿತ್ತು. ಚಿಕಿತ್ಸೆಗೆ ಅವರ ದೇಹ ಸ್ಪಂದಿಸುತ್ತಿರಲಿಲ್ಲ. ಅವರನ್ನು ವೆಂಟಿಲೇಟರ್ ನಲ್ಲಿ ಇಡಲಾಗಿತ್ತು ಎಂದು ತಿಳಿದುಬಂದಿದೆ.

ಕಳೆದ ಕೆಲ ತಿಂಗಳುಗಳಿಂದ ಶ್ರೀಗಳಿಗೆ ಆಗಾಗ ಆರೋಗ್ಯ ಸಮಸ್ಯೆ ಎದುರಾಗುತ್ತಲೇ ಇತ್ತು.ಈ ಹಿಂದೆ ಥೈರಾಯ್ಡ್ ಸಮಸ್ಯೆ ಇದ್ದಿದ್ದರಿಂದ ಶೀರೂರು ಶ್ರೀಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಬುಧವಾರ  ಸಂಜೆ ರಕ್ತದೊತ್ತಡ ಮತ್ತು ಹೃದಯಬಡಿತ ಕಡಿಮೆಯಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಇಹಲೋಕ ತ್ಯಜಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English