ಬೆಂಗಳೂರು: ಉಚಿತ ಬಸ್ ಪಾಸ್ಗಾಗಿ ಆಗ್ರಹಿಸಿ ನಾಳೆ ಶಾಲಾ-ಕಾಲೇಜು ಬಂದ್ ಮಾಡಿ ಪ್ರತಿಭಟನೆ ಮಾಡಲು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ನಿರ್ಧರಿಸಿವೆ. ಕಳೆದ ಒಂದು ತಿಂಗಳಿನಿಂದಲೂ ರಾಜ್ಯಾದ್ಯಂತ ಸಾವಿರಾರು ವಿದ್ಯಾರ್ಥಿಗಳನ್ನು ಸಂಘಟಿಸಿ ಬಸ್ ಪಾಸ್ ಸಮಸ್ಯೆಯ ಬಗ್ಗೆ ಅಹವಾಲನ್ನು ಸರ್ಕಾರದ ಮುಂದಿಟ್ಟಿವೆ.
ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಮತ್ತು ಈಗಾಗಲೇ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳಿಗೆ ಹಣ ವಾಪಸ್ಸು ಮಾಡಬೇಕೆಂಬ ಬೇಡಿಕೆಗಳನ್ನು ವಿದ್ಯಾರ್ಥಿಗಳು ಮುಂದಿಟ್ಟಿದ್ದಾರೆ.
ಈ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಕಾರಣ ಜುಲೈ 21ರಂದು ಅಖಿಲ ಕರ್ನಾಟಕ ಶಾಲಾ-ಕಾಲೇಜು ಬಂದ್ಗೆ ಕರೆ ಕೊಡಲಾಗಿದೆ. ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸಲು ವಿದ್ಯಾರ್ಥಿಗಳು ಸಜ್ಜಾಗಿದ್ದಾರೆ.
ಈ ಸಂಬಂಧ ಸಿಎಂ ಅವರಿಗೆ ಮನವಿ ಪತ್ರವನ್ನು ನೀಡಲಾಗಿದೆ. ಆದರೆ ಈ ಬಗ್ಗೆ ತಲೆಕೆಡಿಸಿಕೊಳ್ಳದ ಹಿನ್ನೆಲೆಯಲ್ಲಿ ನಾಳೆ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್(ಎಐಡಿಎಸ್ಓ), ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್(ಎಐಡಿವೈಓ) ಹಾಗೂ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆಗಳು ಬಂದ್ಗೆ ಕರೆ ನೀಡಿವೆ.
Click this button or press Ctrl+G to toggle between Kannada and English