ಬೆಂಗಳೂರು: ಕಾರ್ಮಿಕರಿಗೆ ಮನೆ ನಿರ್ಮಾಣ ವೆಚ್ಚದಲ್ಲಿ ಹೆಚ್ಚಳ ಮಾಡಿದ್ದು, ೨ ಲಕ್ಷ ರೂ.ನಿಂದ ೫ ಲಕ್ಷಕ್ಕೆ ಮನೆ ನಿರ್ಮಾಣ ವೆಚ್ಚ ಹೆಚ್ಚಳ ಮಾಡಲು ನಿರ್ಧರಿಸಿದ್ದೇವೆ ಎಂದು ಕಾರ್ಮಿಕ ಸಚಿವ ವೆಂಕಟ್ರಮಣಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, 9ಲಕ್ಷಕ್ಕೆ ಮನೆ ಕಟ್ಟಲು ಆಗುವುದಿಲ್ಲ. ಹಾಗಾಗಿ ವೆಚ್ಚ ಹೆಚ್ಚಳ ಮಾಡಿದ್ದೇವೆ. ನಿವೇಶನ ಇರುವ ಕಾರ್ಮಿಕರಿಗೆ ಮಾತ್ರ ಮನೆ ನಿರ್ಮಾಣ ಮಾಡಿಕೊಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ರಾಜೀವ್ ಗಾಂಧಿ ವಸತಿ ನಿಗಮದಡಿ ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಹಂತ ಹಂತವಾಗಿ ಕಾರ್ಮಿಕರಿಗೆ ಮನೆಗಳ ನಿರ್ಮಾಣ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಇಂದಿರಾನಗರ ಇಎಸ್ಐ ಆಸ್ಪತ್ರೆಗೆ ಭೆಟಿ ನೀಡಿದ್ದ ವೇಳೆ ಕೆಲ ವೈದ್ಯರ ನಿರ್ಲಕ್ಷ್ಯತೆ ಗಮನಕ್ಕೆ ಬಂದಿದೆ. ಈ ಹಿನ್ನಲೆಯಲ್ಲಿ ಕೂಡಲೇ ನಿರ್ದೇಶಕರನ್ನು ಕರೆದು ಕ್ರಮಕ್ಕೆ ಸೂಚನೆಯನ್ನು ನೀಡಿದ್ದೇನೆ. ಅಷ್ಟೇ ಅಲ್ಲದೆ, ಅನೇಕ ಕಾರ್ಮಿಕರು ಒಂದೇ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರಣ ಅವರನ್ನು ಬೇರೆ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.
Click this button or press Ctrl+G to toggle between Kannada and English