ಮಂಗಳೂರು: 2009 ರಲ್ಲಿ ನಡೆದ ಸಂತು ಅಲಿಯಾಸ್ ಸಂತೋಷ್ ಕೊಲೆ ಪ್ರಕರಣವನ್ನು ಸುದೀರ್ಘ ವಿಚಾರಣೆ ನಡೆಸಿದ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಆರೋಪಿಗಳಾದ ಇಕ್ಬಾಲ್ ಕಾವೂರು ಹಾಗೂ ಫಾರೂಕ್ ಕಾರ್ಕಳ ಇವರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ.
ಪ್ರಕರಣ ಹಿನ್ನಲೆ
2009 ಫೆಬ್ರವರಿ 18 ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಹೋಗುತ್ತಿದ್ದ ಕ್ಯಾಂಡಲ್ ಸಂತು ಅಲಿಯಾಸ್ ಸಂತೋಷ್ ಎಂಬುವವನಿಗೆ ಅಪರಿಚಿತರ ಗುಂಪೊಂದು ತಲೆ ಮತ್ತು ಹೊಟ್ಟೆ ಭಾಗಕ್ಕೆ ಕತ್ತಿಯಿಂದ ಇರಿದು ತೀವ್ರವಾಗಿ ಗಾಯಗೊಳಿಸಿ ಕೊಲೆಗೈದಿತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.
ಬಂಟ್ವಾಳ ಗ್ರಾಮಾಂತರ ಪೊಲೀಸರು 22 ಜನ ಆರೋಪಿಗಳನ್ನು ಬಂಧಿಸಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಈ ಬಗ್ಗೆ ಸುಧೀರ್ಘ ವಿಚಾರಣೆ ನಡೆಸಿದ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.
ಪ್ರಕರಣದ ತನಿಖೆಯನ್ನು ನಡೆಸಿದ ಆಗಿನ ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ನಂಜುಂಡೇಗೌಡ ಹಾಗೂ ಪೊಲೀಸ್ ಸಿಬ್ಬಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಆರ್. ರವಿಕಾಂತೇಗೌಡ ಪ್ರಶಂಶಿಸಿದ್ದು, ಬಹುಮಾನ ಸಹ ಘೋಷಿಸಿದ್ದಾರೆ.
Click this button or press Ctrl+G to toggle between Kannada and English