ದುಬೈಯಲ್ಲಿ ವಿಶ್ವ ತುಳು ಸಮ್ಮೇಳನ

2:20 PM, Monday, July 23rd, 2018
Share
1 Star2 Stars3 Stars4 Stars5 Stars
(No Ratings Yet)
Loading...

veerendra-heggdeಮಂಗಳೂರು : ಅರಬ್ ಸಂಸ್ಥಾನದಲ್ಲಿ ನವಂಬರ್ 23 ಮತ್ತು 24 ರಂದು ದುಬಾಯಿಯ ಅಲ್‌ನಾಸರ್ ಲೀಸರ್ ಲ್ಯಾಂಡ್‌ಐಸ್‌ರಿಂಕ್ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವ ತುಳು ಸಮ್ಮೇಳನ ಜರಗಲಿದ್ದು, ಸಮ್ಮೇಳನದ ಕುರಿತು ಸಂಘಟನೆಯ ಪ್ರಧಾನ ಸಂಘಟಕ ಸರ್ವೋತ್ತಮ ಶೆಟ್ಟಿ ದುಬಾಯಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಕಾರ್ಯಕ್ರಮದ ರೂಪುರಶಗಳನ್ನು ವಿವರಿಸಿ ಸಮ್ಮೇಳನಕ್ಕೆ ಆಹ್ವಾನಿಸಿದರು.

ಸಮ್ಮೇಳನ ತಯಾರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ.ವೀರೆಂದ್ರ ಹೆಗ್ಗಡೆ ಅವರು ಎರಡು ದಿನಗಳ ಕಾಲ ನಡೆಯುವ ವಿಶ್ವ ತುಳು ಸಮ್ಮೇಳನಕ್ಕೆ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಕೊಲ್ಲಿ ರಾಷ್ಟ್ರದ ತುಳುವರು, ಅಖಿಲಭಾರತ ತುಳು ಒಕ್ಕೂಟ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಸಾಗರೋತ್ತರ ತುಳುವರ ಸಹಯೋಗದೊಂದಿಗೆ ಆಯೋಜಿಸಲಾಗುವ ವಿಶ್ವ ತುಳು ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ವೀರೆಂದ್ರ ಹೆಗ್ಗಡೆ, ಗೌರವ ಅತಿಥಿಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಮತ್ತು ಮುಸ್ಲಿಂ ಪ್ರವಚನಕಾರರು ಮತ್ತು ಅತಿಥಿಗಳಾಗಿ ಕರ್ನಾಟಕದಿಂದ ಗಣ್ಯರು ಭಾಗವಹಿಸಲಿದ್ದಾರೆ. ಸಮ್ಮೇಳನದ ಅಧ್ಯಕ್ಷರಾಗಿ ಎನ್.ಎಂ.ಸಿ ಸಮೂಹ ಸಂಸ್ಥೆಯ ಸ್ಥಾಪಕರು ಮತ್ತು ಚೇರ್‌ಮ್ಯಾನ್ ಡಾ. ಬಿ.ಆರ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ವಿಶ್ವ ತುಳು ಸಮ್ಮೇಳನದ ವಿಶೇಷ ಸ್ಮರಣ ಸಂಚಿಕೆ ಲೋಕಾರ್ಪಣೆಗೊಳ್ಳಲಿದೆ.

ಡಾ, ವೀರೆಂದ್ರ ಹೆಗ್ಗಡೆ ಮತ್ತು ಶ್ರೀಮತಿ ಹೇಮಾವತಿ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಸರ್ವೋತ್ತಮ ಶೆಟ್ಟಿ ಅವರ ನಿಯೋಗದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ.ಭಂಡಾರಿ, ಅಖಿಲ ಭಾರತ ತುಳು ಒಕ್ಕೂಟದ ಪದಾಧಿಕಾರಿಗಳಾದ ಧರ್ಮಪಾಲ್ ದೇವಾಡಿಗ, ನಿಟ್ಟೆ ಶಶಿಧರ ಶೆಟ್ಟಿ, ಶ್ರೀಯಾನ್ ಮುಂಬಾಯಿ ಮೊದಲಾದವರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English