ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಉಚಿತ ಬಸ್‌ಪಾಸ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಸೋಮವಾರ ನಡೆದ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಉಚಿತ ಬಸ್‌ಪಾಸ್ ನೀಡಲಾಗುತ್ತದೆ, ಖಾಸಗಿ ಶಾಲೆ ಮಕ್ಕಳು 50 ರಿಂದ 1 ಲಕ್ಷ ರೂ. ನೀಡಿ ಶಾಲೆಗೆ ಹೋಗುತ್ತಾರೆ ಅವರಿಗೆ ಬಸ್‌ಚಾರ್ಜ್ ನೀಡುವುದು ಕಷ್ಟವಾಗುವುದಿಲ್ಲ ಎಂದು ಸ್ವಲ್ಪ ಖಾರವಾಗಿಯೇ ನುಡಿದಿದ್ದಾರೆ.
ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್ ನೀಡುವಂತೆ ಹಲವು ದಿನಗಳಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು, ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಾನು ಚುನಾವಣೆಗೂ ಮುನ್ನ ಉಚಿತ ಬಸ್‌ಪಾಸ್ ನೀಡುವುದಾಗಿ ಹೇಳಿರಲಿಲ್ಲ ಎಂದಿದ್ದರು. ಇದೀಗ ಬಸ್‌ಪಾಸ್ ಕುರಿತು ಮತ್ತೊಮ್ಮೆ ಪ್ರತಿಕ್ರಿಯೆ ನೀಡಿರುವ ಅವರು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್‌ಪಾಸ್ ನೀಡಲಾಗುತ್ತದೆ ಎಂದಿದ್ದಾರೆ.
ಖಾಸಗಿ ಶಾಲಾ ವಿದ್ಯಾರ್ಥಿಗಳು 50 ಸಾವಿರದಿಂದ 1 ಲಕ್ಷದವರೆಗೂ ಡೊನೇಶನ್ ನೀಡಿ ಶಾಲೆ ಸೇರುತ್ತಾರೆ, ಅಂತವರಿಗೆ ದುಡ್ಡುಕೊಟ್ಟು ಬಸ್‌ನಲ್ಲಿ ಪ್ರಯಾಣಿಸುವುದು ಕಷ್ಟವಾಗುವುದಿಲ್ಲ, ಉಚಿತ ಬಸ್‌ಪಾಸ್ ಬೇಕಿದ್ದರೆ ಸರ್ಕಾರಿ ಶಾಲೆಗಳಿಗೆ ಬನ್ನು ನಿಮಗೂ ಬಸ್‌ಪಾಸ್ ಕೊಡೋಣ ಎಂದು ಪರೋಕ್ಷವಾಗಿ ನುಡಿದಿದ್ದಾರೆ. ಮಂಗಳವಾರ ಸಭೆ ಕರೆದು ಈ ಕುರಿತು ಚರ್ಚೆ ನಡೆಸಿ ಒಂದು ತೀರ್ಮಾನಕ್ಕೆ ಬರುವುದಾಗಿ ತಿಳಿಸಿದರು.
Click this button or press Ctrl+G to toggle between Kannada and English