ಗೌರಿ ಲಂಕೇಶ್ ಹತ್ಯೆ ಪ್ರಕರಣ..ಮತ್ತಿಬ್ಬರ ಆರೋಪಿಗಳ ಬಂಧನ!

6:26 PM, Monday, July 23rd, 2018
Share
1 Star2 Stars3 Stars4 Stars5 Stars
(5 rating, 1 votes)
Loading...

gouri-lankeshಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಹುಬ್ಬಳ್ಳಿ ನಿವಾಸಿಗಳಾದ ಅಮಿತ್ ರಾಮಚಂದ್ರ ಮತ್ತು ಗಣೇಶ್ ಮಿಸ್ಕಿ ಬಂಧಿತ ಆರೋಪಿಗಳು.

ಇಬ್ಬರನ್ನೂ ಎಸ್ಐಟಿ ಕಚೇರಿಯಲ್ಲಿ ಅಧಿಕಾರಿಗಳು ವಿಚಾರಣೆಗಾಗಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದರು. ವಿಚಾರಣೆ ವೇಳೆ ಗೌರಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳು ಭಾಗಿಯಾಗಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳಿಗೆ ಖಚಿತಪಟ್ಟ ಹಿನ್ನೆಲೆಯಲ್ಲಿ ಇಬ್ಬರನ್ನೂ ಬಂಧನಕ್ಕೊಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ಸಂಜೆ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿತ್ತು. ಇಬ್ಬರೂ ಆರೋಪಿಗಳು ಹುಬ್ಬಳ್ಳಿಯ ಬನಶಂಕರಿ ದೇವಸ್ಥಾನದ ಬಳಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರೂ ಕೂಡ ಈಗಾಗಲೇ ಬಂಧನಕ್ಕೊಳಗಾಗಿರುವ ಆರೋಪಿಗಳಿಗೆ ಸಹಕಾರ ನೀಡಿದ್ದರು ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಆರೋಪಿಗಳನ್ನು ಎಸ್ಐಟಿ ಅಧಿಕಾರಿಗಳು ಮೂರನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English