ಗ್ಯಾಸ್​ ಸಿಲಿಂಡರ್​ ಸ್ಫೋಟ..ಸ್ಥಳದಲ್ಲೇ ಐದು ಮಂದಿ ಸಾವು..!

1:00 PM, Tuesday, July 24th, 2018
Share
1 Star2 Stars3 Stars4 Stars5 Stars
(No Ratings Yet)
Loading...

blastedಆಗ್ರಾ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸ್ಥಳದಲ್ಲೇ ಐದು ಮಂದಿ ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಗ್ರಾದ ಇರಾದತ್ ನಗರದಲ್ಲಿ ಸೋಮವಾರ ನಡೆದಿದೆ.

ದುರ್ಘಟನೆಯಲ್ಲಿ ಐದು ಜನ ಸಜೀವ ದಹನವಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಶಾಸಕ ಮಹೇಶ್ ಗೋಯಲ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಾರಂಭಿಸಿದ್ದಾರೆ. ಸದ್ಯ ಘಟನೆಗೆ ಕಾರಣ ತಿಳಿದುಬಂದಿಲ್ಲ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English