ಮಂಗಳೂರು: ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಪೋಷಿಸುವ ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಅಗತ್ಯವೆನಿಸುವ ರಂಗಮಂದಿರ ನಿರ್ಮಾಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪಕುಮಾರ ಕಲ್ಕೂರ ಒತ್ತಾಯಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವೆ ಡಾ. ಜಯಮಾಲಾ ಅವರನ್ನು ಸಾಹಿತ್ಯ ಪರಿಷತ್ತಿನ ನಿಯೋಗದೊಂದಿಗೆ ಭೇಟಿಮಾಡಿ ರಂಗಮಂದಿರದ ಅಗತ್ಯತೆಯ ಬಗ್ಗೆ ಕಲ್ಕೂರ ಅವರು ಪ್ರಸ್ತಾಪಿಸಿದರಲ್ಲದೆ ಸಚಿವರಿಗೆ ಸಾಹಿತ್ಯ ಪರಿಷತ್ತಿನಿಂದ ಮನವಿಯೊಂದನ್ನು ಸಲ್ಲಿಸಿದರು.
ಈ ಸಂದರ್ಭಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ಅಲ್ಲದೆ ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ ಶೆಟ್ಟಿ, ಜಿಲ್ಲಾ ಕ.ಸಾ.ಪ ಗೌರವ ಕೋಶಾಧಿಕಾರಿ ಪೂರ್ಣಿಮಾ ರಾವ್ ಪೇಜಾವರ, ಪ್ರಭಾಕರ ರಾವ್ ಪೇಜಾವರ, ಜಿ.ಕೆ. ಭಟ್ ಸೇರಾಜೆ, ದಿವಾಣ ಗೋವಿಂದ ಭಟ್ಟ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English