ಧಾರವಾಡ: ರೈತರು, ಕೂಲಿ ಕಾರ್ಮಿಕರ ಬೇಡಿಕೆ ಹಾಗೂ ಬೆಳೆವಿಮೆ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.
ಬ್ಯಾಂಕ್ ಅಧಿಕಾರಿಗಳು ಬೆಳೆವಿಮೆ ಹಣವನ್ನು ರೈತರ ಸಾಲಕ್ಕೆ ಜಮಾ ಮಾಡುತ್ತಿದ್ದಾರೆ. ಅದನ್ನು ನೇರವಾಗಿ ರೈತರಿಗೆ ನೀಡಬೇಕು. ಸಣ್ಣ ,ಅತಿ ಸಣ್ಣ ರೈತ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಸರ್ಕಾರಿ ಉದ್ಯೋಗ ಮೀಸಲಾತಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರೈತರ ಬೆಳೆಸಾಲ ಮನ್ನಾ ಯೋಜನೆ ಶೀಘ್ರದಲ್ಲಿ ರೈತರ ಖಾತೆಗೆ ಜಮಾ ಆಗುವಂತೆ ಕ್ರಮ ಜರುಗಿಸಲು ಸ್ಪಷ್ಟನೆ ನೀಡಬೇಕು. ಕೃಷಿ ಉತ್ಪನ್ನ ಬೆಂಬಲ ಬೆಲೆಯಡಿ ಕಡಲೆ ಖರೀದಿ ಬಾಕಿ ಹಣ ಬಿಡುಗಡೆಗೊಳಿಸಲು ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿಕೊಂಡರು.
Click this button or press Ctrl+G to toggle between Kannada and English
June 29th, 2019 at 15:17:12
ಸಾಲ