ಹುಬ್ಬಳ್ಳಿ : ತೃತೀಯ ರಂಗ ಒಂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯವರು ಹತಾಶರಾಗಿದ್ದಾರೆ. ಹೀಗಾಗಿ ರಾಹುಲ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ತಮ್ಮ ಮಿತ್ರಪಕ್ಷಗಳಿಗೆ ನೀಡಿದ್ದ ಆಶ್ವಾಸನೆಗಳನ್ನ ಈಡೇರಿಸಿಲ್ಲ. ಹೀಗಾಗಿ ಶಿವಸೇನೆ, ಪಿಡಿಪಿ, ಟಿಡಿಪಿ ಸೇರಿದಂತೆ ಇನ್ನಿತರ ಮಿತ್ರಪಕ್ಷಗಳು ಬಿಜೆಪಿಯಿಂದ ದೂರವಾಗುತ್ತಿವೆ. ಇದೀಗ ವಿಪಕ್ಷಗಳು ಒಂದಾಗಿರುವುದರಿಂದ ಬಿಜೆಪಿಗೆ ನಡುಕ ಹುಟ್ಟಿದೆ. ಅಲ್ಲದೇ ಮುಂಬರುವ ಚುನಾವಣೆಯಲ್ಲಿ ತೃತೀಯರಂಗ ಒಗ್ಗೂಡಿ ಚುನಾವಣೆ ಎದುರಿಸಲಿದೆ. ಪ್ರಧಾನಿ ಆಯ್ಕೆ ಮುಂದಿನ ವಿಚಾರವಾಗಿದೆ ಎಂದರು.
ಅವಿನಾಶ ಅಮರಲಾಲ್ ಲಾಕರ್ ಪ್ರಕರಣ ಹಿನ್ನೆಲೆಯಲ್ಲಿ ಅವರೊಂದಿಗೆ ರಾಜಕೀಯ ಪಕ್ಷಗಳ ನಾಯಕರ ಮಕ್ಕಳು ಶಾಮೀಲಾಗಿದ್ದಾರೆಂದು ಮುಂಚಿತವಾಗಿ ಆರೋಪ ಮಾಡುವುದು ಸರಿಯಲ್ಲ. ಈ ಕುರಿತು ಸಮಗ್ರ ತನಿಖೆ ನಡೆಯಲಿ ಎಂದು ತಿಳಿಸಿದರು. ರಾಹುಲ್ ವಿರುದ್ಧ ಪ್ರಹ್ಲಾದ್ ಜೋಶಿ ಹಕ್ಕು ಚ್ಯುತಿ ಮಂಡಿಸಲಿ ಅಲ್ಲದೇ ಆ ಕುರಿತು ಸದನದಲ್ಲಿ ಚರ್ಚೆಯಾಗಲಿ ಇದೇ ವೇಳೆ ಹೇಳಿದರು.
Click this button or press Ctrl+G to toggle between Kannada and English