ಉಡುಪಿ: ಉಡುಪಿ ಸಮೀಪದ ಕುತ್ಯಾರು ಆನೆಗುಂದಿ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಕುಟುಂಬ ಸಮೇತರಾಗಿ ಆಗಮಿಸಿದ್ದು, ಇಲ್ಲಿ ಮಹಾರುದ್ರಯಾಗ ಹಾಗೂ ಶತಚಂಡಿಕಾಯಾಗ ಕೈಗೊಂಡಿದ್ದಾರೆ.
ಶನಿವಾರದಂದು ಮಠದಲ್ಲಿ ತಂಗಿದ್ದ ಯಡಿಯೂರಪ್ಪ ಅವರು ಭಾನುವಾರ ಹಾಗೂ ಸೋಮವಾರದಂದು ನಡೆದ ಯಾಗದಲ್ಲಿ ಭಾಗಿಯಾಗಿದ್ದರು.
ಮತ್ತೆ ಸಿ.ಎಂ ಪಟ್ಟ ದೊರಕಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ದೇವರಮೊರೆ ಹೋಗಿದ್ದಾರೆಯೇ ಎಂಬ ಕುತೂಹಲ ಇದೀಗ ಎಲ್ಲರಲ್ಲೂ ಮೂಡುತ್ತಿದೆ.
ಪುತ್ತೂರಿನ ಪುರೋಹಿತರಾದ ಶ್ರೀಕೃಷ್ಣ ಉಪಾಧ್ಯಾಯ ಮತ್ತು ಸುಳ್ಯ ಮೂಲದ ಪುರೋಹಿತರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು.
Click this button or press Ctrl+G to toggle between Kannada and English