ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನಲ್ಲಿರುವ ಕುಂಬ್ರದ ನ್ಯಾಯಬೆಲೆ ಅಂಗಡಿಯಲ್ಲಿ ಕೊಳೆತು ಹೋದ ಅನ್ನಭಾಗ್ಯದ ಅಕ್ಕಿ ಮೂಟೆಗಳು ಪತ್ತೆಯಾಗಿವೆ.
ನ್ಯಾಯಬೆಲೆ ಅಂಗಡಿಯಲ್ಲಿ ಹುಳು ತುಂಬಿದ ಕೊಳೆತ ಅಕ್ಕಿ ಮೂಟೆಗಳು ಪತ್ತೆಯಾಗಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಜಿಲ್ಲೆಯ ಕುಂಬ್ರ ವ್ಯವಸಾಯ ಸೇವಾ ಸಹಕಾರಿ ಸಂಘದ ಈ ನ್ಯಾಯಬೆಲೆ ಅಂಗಡಿಯಲ್ಲಿ ಹುಳು ತುಂಬಿದ ಅನ್ನಭಾಗ್ಯದ ಅಕ್ಕಿ ಮೂಟೆಗಳು ಪತ್ತೆಯಾಗಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಅಂಗಡಿ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಆಹಾರ ಇಲಾಖಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಕುರಿತು ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
Click this button or press Ctrl+G to toggle between Kannada and English