ಶ್ರೀಗಂಧ ಕಳ್ಳತನ ಪ್ರಕರಣ..ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!

12:21 PM, Thursday, July 26th, 2018
Share
1 Star2 Stars3 Stars4 Stars5 Stars
(No Ratings Yet)
Loading...

police-arrestಮಂಗಳೂರು: ಶ್ರೀಗಂಧ ಕಳ್ಳತನ ಪ್ರಕರಣದಲ್ಲಿ ಕಳೆದ 44 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅಬ್ಬಾಸ್, 1974 ಜುಲೈ 15 ರಂದು ತನ್ನ ಬೈಕ್ನಲ್ಲಿ 7 ಕೆಜಿ ಶ್ರೀಗಂಧ ಸಾಗಿಸುತ್ತಿದ್ದ ವೇಳೆ ಬುಲ್ಲೇರಿ ಕಟ್ಟೆ ಫುಡ್ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ಮಾಡುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಗಂಗೋಜಿ ರಾವ್ ಬೈಕ್ ತಪಾಸಣೆ ಮಾಡಿದಾಗ ತಪ್ಪಿಸಿಕೊಂಡಿದ್ದ.

ಈ ಬಗ್ಗೆ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ನಾಲ್ಕು ತಿಂಗಳಿಂದ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಹೆಡ್ ಕಾನ್ಸ್ಟೇಬಲ್ ಪರಮೇಶ್ವರ್ ಅವರು ಬುಧವಾರ ಆರೋಪಿಯನ್ನು ಕೇರಳದ ಕಾಸರಗೋಡು ಜಿಲ್ಲೆಯ ಚಂಗಲ ಗ್ರಾಮದ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English