ಮೈಸೂರು : ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಸಂಸದೆ ಶೋಭಾ ಕರದ್ಲಾಂಜೆ ಹೇಳಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ನಗುತ್ತಲೇ ಹೇಳಿಕೆ ನೀಡುವ ಮೂಲಕ ಎಲ್ಲ ಅಚ್ಚರಿಗೆ ಕಾರಣವಾಗಿದ್ದಾರೆ.
ಆಶಾಢ ಮಾಸದ ಎರಡನೇ ಶುಕ್ರವಾರವಾದ ಇಂದು ಸಂಸಸೆ ಶೋಭಾ ಕರಂದ್ಲಾಜೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ನಡೆದುಕೊಂಡೇ ಮೆಟ್ಟಿಲು ಏರಿದ ಅವರು, ಇದಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿ ಈ ಸ್ಫೋಟಕ ವಿಷಯ ಹೊರಗಡೆವಿ ಅಚ್ಚರಿಗೆ ಕಾರಣವಾದರು.
ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯನ್ನು ಸರ್ವೇ ಮೂಲಕವೇ ನಡೆಸಲು ರಾಜ್ಯಾಧ್ಯಕ್ಷ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದರು.
ಇದೇ ವೇಳೆ ಮಾಧ್ಯಮಗಳು ನೀವು ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಿರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತಾವು ಮುಂವರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಅಚ್ಚರಿ ಮೂಡಿಸಿದರು.
ಇನ್ನು ಕೋಡಿ ಮಠದ ಸ್ವಾಮೀಜಿಗಳ ಭವಿಷ್ಯದ ಬಗ್ಗೆ ಪ್ರತಿಕ್ರಿಯಿಸಿದ ಶೋಭಾ ಕರದ್ಲಾಂಜೆ, ಸ್ವಾಮೀಜಿಗಳ ಭವಿಷ್ಯದ ಬಗ್ಗೆ ನನಗೆ ಗೊತ್ತಿಲ್ಲ. ಭಾರತೀಯ ಜನತಾ ಪಾರ್ಟಿಗೆ ಜನ ಬೆಂಬಲ ಮತ್ತು ದೇವರ ಆಶೀರ್ವಾದವಿದೆ ಎಂದರು.
ರಾಜ್ಯದಲ್ಲಿ ಯಾವುದೇ ಸರ್ಕಾರ, ಪಾರ್ಟಿ ಅಧಿಕಾರಕ್ಕೆ ಬರಬಹುದು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿಯೇ ರಾಜ್ಯದ ರಾಜ. ಎಲ್ಲ ಭಾಗದ ಜನರನ್ನು ಒಂದೇ ರೀತಿಯಲ್ಲಿ ನೋಡಬೇಕು. ರಾಜ್ಯದ ಮುಖ್ಯಮಂತ್ರಿ ಕೇವಲ ಮೂರ್ನಾಲ್ಕು ಜಿಲ್ಲೆಯಗಳಿಗೆ ಸಿಎಂ ಆಗಿರುವುದೇ ಈಗಿನ ದೊಡ್ಡ ಸಮಸ್ಯೆಯಾಗಿದೆ ಎಂದ ಅವರು, ರಾಜ್ಯವನ್ನು ಇಬ್ಭಾಗ ಮಾಡುವುದರಿಂದ ಯಾವುದೇ ಲಾಭ ಇಲ್ಲ ಎಂದರು.
ಉತ್ತರ ಕರ್ನಾಟಕದ ಜನರ ಜೊತೆ ನಾವೆಲ್ಲರೂ ಇದ್ದೇವೆ. ಎಲ್ಲ ಸೌಲಭ್ಯಗಳನ್ನ ಉತ್ತರ ಕರ್ನಾಟಕಕ್ಕೆ ಕೊಡುವುದಕ್ಕೆ ನಾವು ಸಿದ್ದರಿದ್ದೇವೆ. ನಮ್ಮ ಹಿರಿಯರು ಕಷ್ಟಪಟ್ಟು ಕರ್ನಾಟಕ ಏಕೀಕರಣ ಮಾಡಿದ್ದಾರೆ. ಹೀಗಾಗಿ ನಾವೆಲ್ಲ ಒಟ್ಟಾಗಿಯೇ ಇರಬೇಕು ಎಂದು ಹೇಳಿದರು.
Click this button or press Ctrl+G to toggle between Kannada and English