ವಿಜಯವಾಡ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಸಮೇತರಾಗಿ ದೇವೇಗೌಡರು ತಮ್ಮ ಕುಟುಂಬಸ್ಥರೊಂದಿಗೆ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ದೇವರ ಸನ್ನಿಧಿಗೆ ಬಂದು, ವೆಂಕಟೇಶ್ವರನ ದರ್ಶನ ಪಡೆದರು. ದೇವೇಗೌಡರ ಪತ್ನಿ ಚೆನ್ನಮ್ಮ, ಹಾಗೂ ರೇವಣ್ಣ, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸೇರಿದಂತೆ ಗೌಡರ ಇತರ ಕುಟುಂಬ ಸದಸ್ಯರು ದೇವರ ಕೃಪೆಗೆ ಪಾತ್ರರಾದರು.
ತಿಮ್ಮಪ್ಪನ ದರ್ಶನದ ಬಳಿಕ ಗೌಡರ ಕುಟುಂಬಸ್ಥರಿಗೆ ಅರ್ಚರು ಪ್ರಸಾದ, ತೀರ್ಥ ವಿತರಿಸಿದರು. ಇದಕ್ಕೂ ಮುನ್ನ ದೇವಸ್ಥಾನದ ಆಡಳಿತ ಮಂಡಳಿ ಅಧಿಕಾರಿಗಳು ದೇವೇಗೌಡ, ಕುಮಾರಸ್ವಾಮಿ ಕುಟುಂಬಕ್ಕೆ ಅದ್ದೂರಿ ಸ್ವಾಗತ ನೀಡಿದರು. ಗುರುವಾರ ದೇವೇಗೌಡ ಕುಟುಂಬಸ್ಥರು ಬೆಂಗಳೂರಿನಿಂದ ತಿರುಪತಿಗೆ ಬಂದಿದ್ದರು. ಇಂದು ಅವರು ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
Click this button or press Ctrl+G to toggle between Kannada and English