ಮಂಗಳೂರು: ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಪುಣ್ಯ ಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನದಲ್ಲಿ ಬದಲಾವಣೆ ಮಾಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಜೆ 7ರ ನಂತರ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಇಲ್ಲ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.
ಪ್ರತಿನಿತ್ಯ 7.30ಕ್ಕೆ ನಡೆಯುತ್ತಿದ್ದ ಮಹಾಪೂಜೆಯನ್ನು ಇಂದು 6.30ಕ್ಕೆ ನಿಗದಿಪಡಿಸಲಾಗಿದೆ. 7 ಗಂಟೆ ನಂತರ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಇಂದು ಸಂಜೆ ನಡೆಯಬೇಕಿದ್ದ ಆಶ್ಲೇಷ ಪೂಜೆಯನ್ನು ರದ್ದುಗೊಳಿಸಲಾಗಿದೆ. ಅಷ್ಟೆ ಅಲ್ಲದೆ ದೇವಾಲಯದಲ್ಲಿ ಇಂದು ರಾತ್ರಿ ಅನ್ನಪ್ರಸಾದವಿರುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.
ಇನ್ನು ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
Click this button or press Ctrl+G to toggle between Kannada and English