ಉತ್ತರ ಭಾರತದಲ್ಲಿ ಭಾರಿ ಮಳೆ ಬೋರ್ಗರೆಯುತ್ತಿದ್ದಾಳೆ ಯಮುನೆ

2:24 PM, Saturday, July 28th, 2018
Share
1 Star2 Stars3 Stars4 Stars5 Stars
(No Ratings Yet)
Loading...

heavy-rainನವದೆಹಲಿ: ಸತತವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಯಮುನಾನದಿ ತುಂಬಿ ಹರಿಯುತ್ತಿದ್ದು, ಅಪಾಯದ ಮಟ್ಟವನ್ನು ಮೀರಿ ಪ್ರತಾಪ ತೋರುತ್ತಿದ್ದಾಳೆ.

ಈ ಪರಿಣಾಮ ದೆಹಲಿಯ ಕಾಶ್ಮೀರಿ ಗೇಟ್ ಬಳಿಯ ಹಳೆಯ ಕಬ್ಬಿಣದ ಸೇತುವೆ ಮೇಲೆ ನೀರು ಬಂದಿದ್ದು, ಸಂಚಾರಕ್ಕೆ ಸಂಚಕಾರ ಬಂದಿದೆ. ಈ ನಡುವೆ ನಡುವೆ ಅಪಾಯದಲ್ಲಿ ಸಿಲುಕಿದವರ ರಕ್ಷಣೆಗೆ ದೆಹಲಿ ಆಡಳಿತ 43 ಬೋಟ್ಗಳನ್ನ ಕಳುಹಿಸಿಕೊಡಲಾಗಿದೆ.

ಇನ್ನು ಉತ್ತರಪ್ರದೇಶದಲ್ಲಿ ಘಾಜಿಯಾಬಾದ್ನ ವಸುಂಧರಾ ಭಾಗದಲ್ಲಿ ಭಾರಿ ಮಳೆಗೆ ರಸ್ತೆಗಳೆಲ್ಲ ಮಣ್ಣಿನಿಂದ ಆವೃತ್ತವಾಗಿದ್ದು, ಮಣ್ಣು ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದೆ.

ಹಿಮಾಚಲ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಎನ್ಎಚ್ – 5 ಭೂ ಕುಸಿತಕ್ಕೆ ತುತ್ತಾಗಿದ್ದು, ವಾಹನ ಸಂಚಾರ ಬಂದ್ ಆಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English