- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮೈಸೂರಿನಲ್ಲಿ ಪೊಲೀಸ್ ಜೀಪ್​ ಪಲ್ಟಿ… ಮೂವರಿಗೆ ಗಾಯ!

police-jeep [1]ಮೈಸೂರು: ಚಲಿಸುತ್ತಿದ್ದ ಪೊಲೀಸ್ ಜೀಪ್ನ ಆ್ಯಕ್ಸಲ್ ಬ್ಲೇಡ್ ಕಟ್ ಆಗಿ ಪೊಲೀಸ್ ಜೀಪ್ ಪಲ್ಟಿಯಾಗಿರುವ ಘಟನೆ ಹೆಚ್.ಡಿ ಕೋಟೆಯ ಮಾದಾಪುರ ಗ್ರಾಮದಲ್ಲಿ ನಡೆದಿದ್ದು ಜೀಪ್ನಲ್ಲಿದ್ದ ಸಿಪಿಐ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.

ಹೆಚ್.ಡಿ. ಕೋಟೆ ಪೊಲೀಸ್ ಠಾಣೆಗೆ ಸೇರಿದ ಪೊಲೀಸ್ ಜೀಪೊಂದು ಮೈಸೂರಿನಿಂದ ಮಾನಂದವಾಡಿ ರಸ್ತೆಯ ಮೂಲಕ ಹೆಚ್.ಡಿ ಕೋಟೆಗೆ ಹೋಗುತ್ತಿರುವಾಗ ಮಾದಾಪುರ ಗ್ರಾಮದ ಬಳಿ ಜೀಪ್ ನ ಅಕ್ಸೆಲ್ ಬ್ಲೇಡ್ ಕಟ್ಟಾದ, ಪರಿಣಾಮ ಜೀಪ್ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆಯಲ್ಲಿ ಪಲ್ಟಿ ಹೊಡೆದು ರಸ್ತೆ ಬದಿಯಲ್ಲಿದ್ದ ಮನೆಗೆ ಗುದ್ದಿದೆ.

ಈ ಅಫಘಾತದಲ್ಲಿ ಜೀಪ್ ನಲ್ಲಿದ ಸರ್ಕಲ್ ಇನ್ಸ್ ಪೆಕ್ಟರ್ ಹರೀಶ್ ಕುಮಾರ್ ಮತ್ತು ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿದೆ.