ಓಮ್ನಿಯಲ್ಲಿ ಗಾಂಜಾ ಪತ್ತೆ..ಆರೋಪಿ ಸೆರೆ!

10:11 AM, Monday, July 30th, 2018
Share
1 Star2 Stars3 Stars4 Stars5 Stars
(No Ratings Yet)
Loading...

omni-ganjaಮಂಗಳೂರು: ಬಂಟ್ವಾಳ ತಾಲೂಕಿನ ಕಲ್ಲಡ್ಕದಿಂದ ಬಿ.ಸಿ ರೋಡ್ ಕಡೆಗೆ ಸಂಚರಿಸುತ್ತಿದ್ದ ಓಮ್ನಿ ವಾಹನ ತಪಾಸಣೆ ಮಾಡಿದಾಗ ಓಮ್ನಿಯಲ್ಲಿ ಗಾಂಜಾ ಪತ್ತೆಯಾಗಿದೆ.

ಬಂಟ್ವಾಳದ ಗೋಳ್ತಮಜಲುವಿನ ಅಲೀಮ್ ಎಂಬಾತ ಗಾಂಜಾ ಸಾಗಿಸುತ್ತಿದ್ದ ಆರೋಪಿ. ಮೆಲ್ಕಾರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಓಮ್ನಿ ವಾಹನವನ್ನು ತಪಾಸಣಾ ಸ್ಥಳದಿಂದ ಸ್ವಲ್ಪ ದೂರ ನಿಲ್ಲಿಸಿ ಪರಾರಿಯಾಗಲು ಆರೋಪಿ ಯತ್ನಿಸಿದ್ದ.

ಈ ಸಂದರ್ಭದಲ್ಲಿ ಪೊಲೀಸರು ಆತನನ್ನು ಸುತ್ತುವರಿದು ಬಂಧಿಸಿದ್ದು, ಆತನ ಕಾರಿನಲ್ಲಿದ್ದ 2,33,550 ರೂ. ಮೌಲ್ಯದ 2 ಕಿಲೋ 100 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English