‘ನಮ್ಮದು ಒಂದೇ ಕರ್ನಾಟಕ‌.. ಅದು ಅಖಂಡ‌ ಕರ್ನಾಟಕ’: ಸಿದ್ದರಾಮಯ್ಯ

12:14 PM, Monday, July 30th, 2018
Share
1 Star2 Stars3 Stars4 Stars5 Stars
(No Ratings Yet)
Loading...

siddaramaihಬೆಂಗಳೂರು: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕೆಂದು ಎದ್ದಿರುವ ಕೂಗಿನ ಬಗ್ಗೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ‘ನಮ್ಮದು ಒಂದೇ ಕರ್ನಾಟಕ.‌ ಅದು ಅಖಂಡ‌ ಕರ್ನಾಟಕ’ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಉ-ಕ ಪ್ರತ್ಯೇಕ ರಾಜ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿಯ ಕೆಲ ನಾಯಕರು ಹಾಗೂ ಇತರ ಸಂಘಟನೆಗಳು ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿವೆ. ಇದರ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್ಗನ್ನು ಮಾಡಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೆ ಆಕ್ಷೇಪಿಸಿದ್ದಾರೆ.

‘ಉತ್ತರ-ದಕ್ಷಿಣ ಭೇದ ನಮಗಿಲ್ಲ. ನಮ್ಮದು ಒಂದೇ ಕರ್ನಾಟಕ.‌ ಅದು ಅಖಂಡ‌ ಕರ್ನಾಟಕ. ಚಾರಿತ್ರಿಕ ಕಾರಣಗಳಿಗಾಗಿ ರಾಜ್ಯದ ಕೆಲವು ಭಾಗಗಳು ಹಿಂದುಳಿದಿರುವುದು ನಿಜ. ಅವುಗಳ ಅಭಿವೃದ್ಧಿಗೆ ಒತ್ತು ನೀಡುವ ಪ್ರಾದೇಶಿಕ‌ ನ್ಯಾಯದ ಪರವಾಗಿ ನಮ್ಮ ಪಕ್ಷ ಇದೆ. ಜಾತಿ-ಧರ್ಮಗಳನ್ನು ರಾಜಕೀಯ ಲಾಭಕ್ಕಾಗಿ ಬಳಸುವುದು‌ ಜನದ್ರೋಹದ ಕೆಲಸ. ಅಖಂಡ ಕರ್ನಾಟಕದ ರಕ್ಷಣೆ-ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧ, ನಾನು‌ ಸದಾ ಸಿದ್ಧ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಉತ್ತರ-ದಕ್ಷಿಣ ಭೇದ ನಮಗಿಲ್ಲ.ನಮ್ಮದು ಒಂದೇ ಕರ್ನಾಟಕ.‌ ಅದು ಅಖಂಡ‌ ಕರ್ನಾಟಕ.

ಚಾರಿತ್ರಿಕ ಕಾರಣಗಳಿಗಾಗಿ ರಾಜ್ಯದ ಕೆಲವು ಭಾಗಗಳು ಹಿಂದುಳಿದಿರುವುದು ನಿಜ. ಅವುಗಳ ಅಭಿವೃದ್ದಿ ಗೆ ಒತ್ತು ನೀಡುವ ಪ್ರಾದೇಶಿಕ‌ ನ್ಯಾಯದ ಪರವಾಗಿ ನಮ್ಮ ಪಕ್ಷ ಇದೆ.

‘ಉತ್ತರ-ದಕ್ಷಿಣದ ನಡುವಿನ ಅಂತರವನ್ನು‌ ಹೋಗಲಾಡಿಸಿ ಸೌಹಾರ್ದತೆಯ ಪರಂಪರೆಯನ್ನು ಗಟ್ಟಿಗೊಳಿಸಲಿಕ್ಕಾಗಿಯೇ ನಾನು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಆ ಕ್ಷೇತ್ರದ ಜನರ ಆಶೀರ್ವಾದ ನನ್ನ ಬದ್ಧತೆಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ’ ಎಂದು ಅವರು ಹೇಳಿದ್ದಾರೆ.

‘ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲು ಸಂವಿಧಾನಕ್ಕೆ ತಿದ್ದುಪಡಿ (371-ಜೆ) ಮಾಡಬೇಕೆಂಬ ಬೇಡಿಕೆ ಈಡೇರಿಸಿದ್ದು ಕಾಂಗ್ರೆಸ್ ಪಕ್ಷ. ಆ ಬೇಡಿಕೆಯನ್ನು ತಿರಸ್ಕರಿಸಿದ್ದ ಬಿಜೆಪಿಯ ನಾಯಕರು ಈಗ ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿರುವುದು ಆತ್ಮದ್ರೋಹ ಮಾತ್ರವಲ್ಲ, ಆತ್ಮವಂಚಕ ನಡವಳಿಕೆ. ಡಿ.ಎಂ.ನಂಜುಂಡಪ್ಪ ಸಮಿತಿಯ‌ ಶಿಫಾರಸಿನಂತೆ ರೂಪಿಸಲಾಗಿದ್ದ ವಿಶೇಷ ಅಭಿವೃದ್ಧಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಅದರ ಅವಧಿಯನ್ನು 5 ವರ್ಷಗಳ ಕಾಲ ವಿಸ್ತರಿಸಿದ್ದು ನಮ್ಮ ಸರ್ಕಾರ. ಪ್ರತಿ ವರ್ಷ ಇದಕ್ಕಾಗಿ 1500 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ನಮ್ಮ ಸರ್ಕಾರ ನೀಡಿತ್ತು’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English