ಸಾರಿಗೆ ಸಚಿವರಿಂದ ಹುಬ್ಬಳ್ಳಿ ಸಿಬಿಟಿ ಹಾಗೂ ಹಳೇ ಬಸ್ ನಿಲ್ದಾಣಗಳಿಗೆ ಭೇಟಿ

1:01 PM, Monday, July 30th, 2018
Share
1 Star2 Stars3 Stars4 Stars5 Stars
(No Ratings Yet)
Loading...

transportಹುಬ್ಬಳ್ಳಿ: ಸಾರಿಗೆ ಸಚಿವ ಡಿಸಿ ತಮ್ಮಣ್ಣ ರವಿವಾರ ಸಂಜೆ ನಗರದ ಸಿಬಿಟಿ ಹಾಗೂ ಹಳೇ ಬಸ್ ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸಿಟಿ ಬಸ್ ಟರ್ಮಿನಲ್ ವೀಕ್ಷೀಸಿದ ಸಚಿವರು, ಕಾಮಗಾರಿಯನ್ನು ಅಧಿಕಾರಿಗಳು ಪರಿಶೀಲಿಸಿ ಮೂರು ತಿಂಗಳಲ್ಲಿ ಬಸ್ ನಿಲ್ದಾಣವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಲಭ್ಯವಾಗುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬೇಡಿಕೆ ಗಣತಿ ಆಧಾರದ ಮೇಲೆ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಬೇಕು. ಅನಗತ್ಯವಾಗಿ ಹೆಚ್ಚಿನ ಅಂತಸ್ತು ಹಾಗೂ ಕಟ್ಟಡಗಳನ್ನು ನಿರ್ಮಾಣ ಮಾಡಬೇಡಿ. ತಾಲೂಕು ಮಟ್ಟದ ಬಸ್ ನಿಲ್ದಾಣಗಳಲ್ಲಿ ಖಾಲಿ ಇರುವ ಕಟ್ಟಡಗಳನ್ನು ಸರ್ಕಾರಿ ಕಚೇರಿಗಳಿಗೆ ಬಾಡಿಗೆ ನೀಡಿ, ಇದರಿಂದ ಸಾರ್ವಜನಿಕರಿಗೂ ಅನೂಕೂಲವಾಗುತ್ತದೆ ಸಂಸ್ಥೆಗೂ ಲಾಭವಾಗುತ್ತದೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

transport-2ನಗರ ಸಾರಿಗೆ ಬಸ್ ನಲ್ಲಿ ಪ್ರಯಾಣ ಮಾಡಿದ ಸಚಿವರು ಹಳೇ ಬಸ್ ನಿಲ್ದಾಣವನ್ನು ವೀಕ್ಷಣೆ ಮಾಡಿದರು. ಬಸ್ ನಿಲ್ದಾಣದ ಶೌಚಾಲಯ ಹಾಗೂ ಇತರೆ ಸ್ಥಳಗಳಿಗೆ ಭೇಟಿ ನೀಡಿ ಪರೀಶಿಲಿಸಿದ ಅವರು ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಸಾರ್ವಜನಿಕರಿಗೆ ಉತ್ತಮ ಸೇವೆ ದೊರಕಬೇಕು. ಬಸ್ ನಿಲ್ದಾಣದ ಶೌಚಾಲಯಗಳು ನಿರ್ವಹಣೆ ಕಳಪೆ ಮಟ್ಟದಲ್ಲಿ ಇದ್ದು, ಅದಷ್ಟು ಬೇಗ ಶೌಚಾಲಯಗಳನ್ನು ಸ್ವಚ್ಛೊಳಿಸಿ ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಬೇಕು. ನಿರ್ವಹಣೆ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಸಲ್ಲದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

transport-3ಸಾರಿಗೆ ಸಂಸ್ಥೆಯ ಬಸ್ ಗಳನ್ನು ವೀಕ್ಷಿಸಿದ ಸಚಿವರು. ಬಸ್ ಇಂಜಿನ್ ಗಳು ಚನ್ನಾಗಿ ಇದ್ದು ಹೊರ ಕವಚಗಳು ಹಾಳಾಗಿವೆ. ಈ ರೀತಿ ಹಾಳಾದ ಬಸ್ ನ ಹೊರ ಕವಚಗಳನ್ನು ಬದಲಿಸಿ ಸುಸ್ತಿತಿಯಲ್ಲಿ ಇಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಾರಿಗೆ ಸಂಸ್ಥೆಯ ವಾಹನಗಳಿಗೆ ತೆರಿಗೆ ವಿನಾಯ್ತಿ ನೀಡುವಂತೆ ಸರ್ಕಾರ ಮಟ್ಟದಲ್ಲಿ ಕಡತವನ್ನು ಅನುಮೋದಿಸಿ ಆರ್ಥಿಕ ಇಲಾಖೆಗೆ ಕಳುಹಿಸಿ ಕೊಡಲಾಗಿದೆ. ಅದಷ್ಟು ಬೇಗ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈ ಕುರಿತಾಗಿ ಕ್ರಮ ಕೈಗೊಳ್ಳಲಾಗುವುದು. ಇಲಾಖೆಯಲ್ಲಿ ನಡೆದಿರುವ ಹಗರಣಗಳ ಬಗ್ಗೆ ಸೂಕ್ತ ಅಧ್ಯಯನ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನಿನ ರೀತಿ ಕ್ರಮ ಕೊಳ್ಳಲಾಗುವುದು ಎಂದು ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ತಿಳಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English