ಮಂಗಳೂರು : ಪೊಲೀಸ್ ಭದ್ರತೆಯ ಜತೆಗೆ ಹಾಗೂ ಪಾಲಿಕೆ ಅಧಿಕಾರಿಗಳು ಮನಪಾ ಸಿಬಂದಿಗಳು ಸ್ಟೇಟ್ ಬ್ಯಾಂಕ್, ಲೇಡಿಗೋಷನ್, ಸರ್ವೀಸ್ ಬಸ್ ನಿಲ್ದಾಣ ಹಾಗೂ ಸೆಂಟ್ರಲ್ ಮಾರ್ಕೆಟ್ ಸಮೀಪದಲ್ಲಿ ಅನಧೀಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ಮಂಗಳವಾರ ನಡೆಯಿತು.
ಬೀದಿಬದಿ ವ್ಯಾಪಾರ ನಡೆಸುವವರನ್ನು ತೆರವು ಮಾಡುವಂತೆ ಮಂಗಳೂರು ಮಹಾನಗರ ಪಾಲಿಕೆ ಸಭೆಯಲ್ಲಿ ವ್ಯಾಪಕ ಆಗ್ರಹ ವ್ಯಕ್ತವಾಗಿತ್ತು. ಈ ಸಂಬಂಧ ಸ್ಟೇಟ್‌ಬ್ಯಾಂಕ್ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಲಾಯಿತು.
ಪಾಲಿಕೆ ಕಂದಾಯ ಇಲಾಖೆ ವತಿಯಿಂದ ಪೊಲೀಸ್ ಭದ್ರತೆಯ ಜತೆಗೆ ಹಾಗೂ ಪಾಲಿಕೆ ಅಧಿಕಾರಿಗಳು ಮನಪಾ ಸಿಬಂದಿಗಳ ಜತೆಗೆ ತೆರವು ಮಾಡಿದರು.
ಕಂದಾಯ ಇಲಾಖೆ ಅಧಿಕಾರಿ ಪ್ರವೀಣ್ ಮಾತನಾಡಿ, ಈ ಹಿಂದೆಯೂ ವ್ಯಾಪಾರಸ್ಥರಿಗೆ ಮಾಹಿತಿ ನೀಡಲಾಗಿತ್ತು. ಮಹಾನಗರ ಪಾಲಿಕೆ ಆಯುಕ್ತರ ಸೂಚನೆಯಂತೆ ಮುಂದಿನ ಒಂದು ತಿಂಗಳ ಕಾಲ ಪಾಲಿಕೆ ವ್ಯಾಪ್ತಿಯಲ್ಲಿ ಅನಧೀಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಯಲಿದೆ ಎಂದರು. ಕಂದಾಯ ಇಲಾಖೆ ಅಧಿಕಾರಿಗಳಾದ ವಿಜಯ್ ಕುಮಾರ್ ಹಾಗೂ ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Click this button or press Ctrl+G to toggle between Kannada and English