ಮಹಾನಗರ : ಜಿಲ್ಲೆಯ ಬಂಟ್ವಾಳ ಪುರಸಭೆ ಹಾಗೂ ಪುತ್ತೂರು, ಉಳ್ಳಾಲ ನಗರಸಭೆಗೆ ಆ. 29ರಂದು ಚುನಾವಣೆ ನಡೆಯಲಿದ್ದು, ಈಗಾಗಲೇ ಪಾಲಿಕೆಯ ವಾರ್ಡ್ ವಾರು ಮೀಸಲಾತಿ ಪ್ರಕಟವಾಗಿದ್ದು,ಇದಕ್ಕೆ ಆಕ್ಷೇಪಗಳು ದಾಖಲಾಗಿದ್ದು, ಒಂದೆರಡು ದಿನದಲ್ಲಿ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆಯಿದೆ.
ಈಗಾಗಲೇ ಬಿಡುಗಡೆಯಾದ ಕರಡು ಮೀಸಲಾತಿಗೆ ಸುಮಾರು 100ಕ್ಕೂ ಅಧಿಕ ಆಕ್ಷೇಪಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಲಾಗಿದೆ. ಇದನ್ನು ಪರಾಮರ್ಶಿಸಿ ನಗರಾಭಿವೃದ್ಧಿ ಇಲಾಖೆಯು ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಿದ್ದು, ಇದರಂತೆ ಈಗಾಗಲೇ ಮೀಸಲಾದ 5ರಿಂದ 6 ಸ್ಥಾನಗಳಲ್ಲಿ ಬದಲಾವಣೆಯಾಗುವ ಸಂಭವವಿದೆ.
ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಂಡ ಬಳಿಕ ಆಕ್ಷೇಪವಿದ್ದಲ್ಲಿ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲು ಅವಕಾಶವಿದೆ. ಆಕ್ಷೇಪವಿಲ್ಲದಿದ್ದರೆ ಅಂತಿಮ ಮೀಸಲಾತಿ ಪಟ್ಟಿಯಂತೆ ಮುಂದಿನ ಪಾಲಿಕೆ ಚುನಾವಣೆ ನಡೆಯಲಿದೆ.
ಮಹಾನಗರ ಪಾಲಿಕೆ ಚುನಾವಣೆ ಮುಂದಿನ ವರ್ಷದ ಮಾರ್ಚ್ ವೇಳೆಗೆ ನಡೆಯುವ ಸಾಧ್ಯತೆ ಇದೆ.
Click this button or press Ctrl+G to toggle between Kannada and English