ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ವಿಧಿವಶ

7:32 PM, Tuesday, August 7th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Karunanidhi ಚೆನ್ನೈ:  ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಕಳೆದ 10 ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ 94 ವರ್ಷದ ಕರುಣಾನಿಧಿ ಅವರ ಆರೋಗ್ಯ ಇಂದು ಮತ್ತಷ್ಟು ಕ್ಷೀಣಿಸಿತ್ತು. ಅಂಗಾಂಗಳ ಕಾರ್ಯನಿರ್ವಹಣೆಯೂ ಕ್ಷೀಣಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಡಿಎಂಕೆ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಆಸ್ಪತ್ರೆ ಬಳಿ ಜಮಾಯಿಸಿದ್ದು,  ಆಸ್ಪತ್ರೆ ಒಳಗೆ ಮತ್ತು ಹೊರಗೆ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ರಾಜರತಿನಂ ಸ್ಟೇಡಿಯಂನಲ್ಲೂ ಸುಮಾರು 1200 ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ 500 ಸಶಸ್ತ್ರ ಪಡೆ ಮತ್ತು 700 ಸ್ಪೇಷಲ್ ಫೋರ್ಸ್ ಕಾರ್ಯ ನಿರ್ವಹಿಸುತ್ತಿದೆ. ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನಾದ್ಯಂತ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರುಣಾನಿಧಿ ಕರ್ನಾಟಕಕ್ಕೆ ಬಂದಿದ್ದಾಗಿನ ಕೆಲವು ಚಿತ್ರಗಳು 

Karunanidhi

ಎಂ. ಕರುಣಾನಿಧಿ ಸತ್ಯಸಾಯಿ ಬಾಬಾ ಮತ್ತು ಕುಮಾರಸ್ವಾಮಿ ಜೊತೆ

Karunanidhi

ಸತ್ಯಸಾಯಿ ಬಾಬಾ ಮತ್ತು  ಯೆಡ್ಯೂರಪ್ಪ

Karunanidhi (3)

ಎಂ. ಕರುಣಾನಿಧಿ ಜೆ.ಎಚ್ ಪಾಟೀಲರ ಜೊತೆ

Karunannidhi

Karunannidhi

ಎಂ. ಕರುಣಾನಿಧಿ ಜೆ.ಎಚ್ ಪಾಟೀಲ ಮತ್ತು ಸಿದ್ದರಾಮಯ್ಯ ಜೊತೆ

Karunannidhi

ಎಂ. ಕರುಣಾನಿಧಿ ವರದಪ್ಪ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಜೊತೆ

Karunannidhi

Karunanidhi

ಎಂ. ಕರುಣಾನಿಧಿ  ಮತ್ತು ಡಿ. ದೇವರಾಜ್ ಅರಸ್ 1974

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English