ಮಂಗಳೂರು: ಪಶ್ಚಿಮಘಟ್ಟದಲ್ಲಿ ಬುಧವಾರದಿಂದ ಮಳೆ ಸುರಿಯುತ್ತಿದ್ದು ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಬೆಳ್ತಂಗಡಿ, ಸುಳ್ಯದಲ್ಲಿಯೂ ವರುಣನ ಆರ್ಭಟ ಜೋರಾಗಿದೆ.
ಭಾರಿ ಮಳೆಯ ಪರಿಣಾಮ ಕುಮಾರಧಾರ, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಮಳೆಯ ಪರಿಣಾಮ ಪುತ್ತೂರು ತಾಲೂಕಿನ ಗುಂಡ್ಯಾ ಸಮೀಪದ ಉದನೆಯಲ್ಲಿ ಸೇತುವೆಯ ಮೇಲೆ ನೀರು ಹರಿಯುತ್ತಿದೆ.
ಶಿರಾಡಿ ಗ್ರಾಮದ ಹಲವು ಮನೆಗಳು ಜಲಾವೃತವಾಗಿದ್ದು, ಉಪ್ಪಿನಂಗಡಿಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ಹೊಸ್ಮಠ ಸೇತುವೆಯೂ ಮುಳುಗಡೆಯಾಗಿದೆ.
Click this button or press Ctrl+G to toggle between Kannada and English